ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ರಬರುತ್ತಿದೆ. ವೋಟರ್ ಐಡಿ ಅಕ್ರಮ ವಿವಾದ ತಾರಕಕ್ಕೆರಿದೆ.
BIGG NEWS: ಬೆಳಗಾವಿಯಲ್ಲಿ ವೃದ್ಧೆ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ೬ ಲಕ್ಷಕ್ಕೂ ಅಧಿಕ ಮತದಾರರ ಹೆಸರನ್ನೇ ವೋಟರ್ ಲಿಸ್ಟ್ ನಿಂದ ಡಿಲಿಟ್ ಮಾಡಲಾಗಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಈ ಕುರಿತು ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ 6, 69,652 ಮತದಾರರ ಹೆಸರು ಡಿಲಿಟ್ ಆಗಿದೆ. ವೋಟರ್ ಐಡಿ ಪರಿಷ್ಕರಣೆ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳೇ ಅಕ್ರಮವೆಸಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತ ಮಿತಿ ಮೀರಿದೆ ಎಂದು ಕಿಡಿಕಾರಿದ್ದಾರೆ.