ಬೆಂಗಳೂರು : ನಮ್ಮ ಮೆಟ್ರೋ ( Namma Metro ) ಕಡೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮೊಬೈಲ್ ನಲ್ಲೇ ನಮ್ಮ ಮೆಟ್ರೋ ಟಿಕೆಟ್ ಬುಕಿಂಗ್ ಅವಕಾಶ ನೀಡಲಾಗಿದೆ. ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ.
ದಿನೇ ದಿನೇ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲೂ ಏರಿಕೆಯಾಗ್ತಿದೆ. ಹೀಗಾಗಿ ಬಿಎಂಆರ್ಸಿಎಲ್ (BMRCL) ಮತ್ತಷ್ಟು ಪ್ರಯಾಣಿಕರನ್ನು ಸೆಳೆಯಲು ಹೊಸ ಪ್ಲಾನ್ ರೆಡಿ ಮಾಡಿದೆ. ಮೆಟ್ರೋ ಪ್ರಯಾಣಿಕರ ಅನುಕೂಲಕ್ಕೆ ಹಲವು ವಿನೂತನ ಯೋಜನೆಗಳನ್ನು ಜಾರಿ ಮಾಡ್ತಾ ಬಂದಿರೋ ಬಿಎಂಆರ್ಸಿಎಲ್ ಇದೀಗ ಮತ್ತೊಂದು ಹೊಸ ಯೋಜನೆ ಜಾರಿ ಮಾಡಲು ಮುಂದಾಗಿದೆ. ಇದೀಗ ಇಂತಹ ನೂತನ ವ್ಯವಸ್ಥೆ ನಾಳೆಯಿಂದ ನಮ್ಮ ಮೆಟ್ರೋದಲ್ಲಿ ತರಲು ಮುಂದಾಗಿದೆ.
ಹೌದು, ತಮ್ಮ ಸ್ಮಾರ್ಟ್ ಪೋನಲ್ಲೇ ಮೊಬೈಲ್ ಅಪ್ಲಿಕೇಷನ್ ಡೌನ್ ಲೋಡ್ ಮಾಡಿ, ನಂತರ ತಾವು ಪ್ರಯಾಣಿಸುವ ಮಾರ್ಗ ಮತ್ತು ಎಷ್ಟು ಸಂಖ್ಯೆಯ ಜನರು ಪ್ರಯಾಣಿಸುತ್ತಾರೆ ಎಂಬುದನ್ನು ನಮೂದಿಸಬೇಕಾಗುತ್ತದೆ. ಬಳಿಕ ಅಪ್ಲಿಕೇಷನ್ ಮೂಲಕ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಬೇಕು. ಕೂಡಲೇ ಪ್ರಯಾಣದ ಮೊತ್ತವು ಆನ್ಲೈನ್ ಮೂಲಕ ಬಿಎಂಆರ್ಸಿಎಲ್ಗೆ ಜಮಾ ಆಗಲಿದೆ. ಇದೀಗ ಇಂತಹ ನೂತನ ವ್ಯವಸ್ಥೆ ನಾಳೆಯಿಂದ ನಮ್ಮ ಮೆಟ್ರೋದಲ್ಲಿ ಜಾರಿಗೆ ಬರಲಿದೆ.