ಸುಭಾಷಿತ :

Tuesday, January 28 , 2020 2:07 PM

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : 4 ದಿನ ಆರ್.ವಿ. ರಸ್ತೆ-ಯಲಚೇನಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ


Wednesday, November 13th, 2019 7:20 am

ಬೆಂಗಳೂರು : ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆಯಲ್ಲಿ 4 ದಿನ ಯಲಚೇನಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ನವೆಂಬರ್ 14 ರಿಂದ 17 ರ ವರೆಗೆ ಯಲಚೇನಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಆರ್. ವಿ. ರಸ್ತೆಯಿಂದ ಯಲಚೇನಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಆರ್ ವಿ.ರಸ್ತೆ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿಗೆ ಬಿಎಂಟಿಸಿ ಬಸ್ ಸೌಲಭ್ಯ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 5 ರಿಂದ ರಾತ್ರಿ 11.30 ರ ವರೆಗೆ ಬಿಎಂಟಿಸಿ ಬಸ್ ಸಂಚಾರ ಇರುತ್ತದೆ.

ನವೆಂಬರ್ 14 ರ ಬೆಳಗ್ಗೆ 5 ಗಂಟೆಯಿಂದ ನವೆಂಬರ್ 17 ರಾತ್ರಿ 11 ಗಂಟೆಯವರೆಗೆ ಸಂಚಾರ ಇರುವುದಿಲ್ಲ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions