ಸುಭಾಷಿತ :

Wednesday, January 22 , 2020 12:12 PM

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಇಂದಿನಿಂದ 4 ದಿನ `ಆರ್.ವಿ. ರಸ್ತೆ-ಯಲಚೇನಹಳ್ಳಿ’ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ


Thursday, November 14th, 2019 6:16 am

ಬೆಂಗಳೂರು : ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ಯಲಚೇನಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಇಂದಿನಿಂದ ನವೆಂಬರ್ 17 ವರೆಗೆ ಯಲಚೇನಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಆರ್. ವಿ. ರಸ್ತೆಯಿಂದ ಯಲಚೇನಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಆರ್ ವಿ.ರಸ್ತೆ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿಗೆ ಬಿಎಂಟಿಸಿ ಬಸ್ ಸೌಲಭ್ಯ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 5 ರಿಂದ ರಾತ್ರಿ 11.30 ವರೆಗೆ ಬಿಎಂಟಿಸಿ ಬಸ್ ಸಂಚಾರ ಇರುತ್ತದೆ.

ಇಂದು ಬೆಳಗ್ಗೆ 5 ಗಂಟೆಯಿಂದ ನವೆಂಬರ್ 17 ರಾತ್ರಿ 11 ಗಂಟೆಯವರೆಗೆ ಸಂಚಾರ ಇರುವುದಿಲ್ಲ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions