ಬೆಂಗಳೂರು: ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿಯನ್ನು 2024ರೊಳಗೆ ಪೂರ್ಣಗೊಳಿಸುವಂತ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಫ್ಲೈಓವರ್ ಗಳನ್ನು ನಿರ್ಮಿಸಲಾಗುತ್ತಿದೆ. ಬೃಹತ್ ಬೆಂಗಳೂರಿಗೆ ಅಭಿವೃದ್ಧಿ ಯೋಜನೆ ಮಾಡಲಾಗುತ್ತಿದೆ. ಮೆಟ್ರೋ 2 ನೇ ಹಂತವನ್ನು 2024 ರೊಳಗೆ ಮುಗಿಸಲು ತಿಳಿಸಲಾಗಿದೆ. ಮೆಟ್ರೋ 3ನೇ ಹಂತಕ್ಕೆ 26ಸಾವಿರ ಕೋಟಿ ರೂ. ಯೋಜನೆ ಕೇಂದ್ರದ ಅನುಮೋದನೆ ದೊರೆತ ತಕ್ಷಣ, ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.
ಸಬ್ ಅರ್ಬನ್ ರೈಲು ಯೋಜನೆ 15 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಪ್ರಧಾನಿಯವರು ಯೋಜನೆಗೆ ಅಡಿಗಲ್ಲು ಹಾಕಿದ್ದಾರೆ. ಸ್ಯಾಟಿಲೈಟ್ ಟೌನ್ ರಿಂಗ್ ರೋಡ್, ಬೆಂಗಳೂರು ಹೊರ ವಲಯದ ರಸ್ತೆಗಳ ಕೆಲಸ ಪ್ರಾರಂಭವಾಗಿದೆ. ಫೆರಿಫೆರಲ್ ರಿಂಗ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕೆಲಸ ಕೈಗೊಳ್ಳಲಾಗುವುದು. ಕಾವೇರಿ 5 ನೇ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತಿದೆ. ಬಹಳ ವರ್ಷದಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲ ಯೋಜನೆಗಳನ್ನು ಜನರ ಮುಂದೆ ಇಡಬೇಕು. ಭಾಜಪ ಕಾರ್ಯಕರ್ತರು ಹೆಮ್ಮೆಯಿಂದ ಜನರ ಬಳಿ ಹೋಗಬಹುದು ಎಂದು ಹೇಳಿದರು.
‘ಸಹಕಾರ ಸಂಘ’ಗಳ ಸದಸ್ಯರಿಗೆ ಗುಡ್ ನ್ಯೂಸ್: ಜ.31ರವರೆಗೆ ‘ಯಶಸ್ವಿನಿ ಯೋಜನೆ’ಗೆ ನೊಂದಣಿಗೆ ಅವಧಿ ವಿಸ್ತರಣೆ
Railway Jobs: 4000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ