ಬೆಂಗಳೂರು: ಜೂನ್.17ರಂದು ವಿವಿಧ ಕಾಮಗಾರಿ ಹಿನ್ನಲೆಯಲ್ಲಿ ಕೆಂಗೇರಿ ಮತ್ತು ಚಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ಭಾಗಶಹ ರದ್ದುಗೊಳಿಸಲಾಗುತ್ತಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಎಂಆರ್ ಸಿಎಲ್, ನೇರಳೆ ಮಾರ್ಗದಲ್ಲಿರುವ ಚಲ್ಲಘಟ್ಟ ಮೆಟ್ರೋ ನಿಲ್ದಾಣದಲ್ಲಿ ದಿನಾಂಕ 17ನೇ ಜೂನ್ 2024 (ಸೋಮವಾರ) ರಂದು ನಿರ್ವಹಣೆ ಕೆಲಸಕ್ಕಾಗಿ, ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 05:00 ರಿಂದ ಮಧ್ಯಾಹ್ನ 01:00 ಗಂಟೆಯ ವರೆಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದೆ.
ಇನ್ನೂ ರೈಲು ಸೇವೆಗಳು ಮಧ್ಯಾಹ್ನ 01:00 ಗಂಟೆಯ ನಂತರ ವೇಳಾಪಟ್ಟಿಯ ಪ್ರಕಾರ ಚಲ್ಲಘಟ್ಟ ಮತ್ತು ವೈಟ್‌ಫೀಲ್ಡ್ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ಲಭ್ಯವಿರುತ್ತವೆ. ಆದಾಗ್ಯೂ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ವೇಳಾಪಟ್ಟಿಯ ಪ್ರಕಾರ ಚಲಿಸುತ್ತವೆ ಎಂಬುದಾಗಿ ಮಾಹಿತಿ ನೀಡಿದೆ.
ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ‘420 ಕೇಸ್’ ದಾಖಲು | Union Minister V.Somanna
ರೈತರೇ ನಿಮ್ಮ ಬೆಳೆಗೆ ‘ಸೈನಿಕ ಹುಳು’ ಬಾಧೆಯೇ? ಜಸ್ಟ್ ಈ ನಿಯಂತ್ರಣ ಕ್ರಮವಹಿಸಿ