ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಈ ಮೂಲಕ ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್ ಅನ್ನು ಬಿಎಂಆರ್ ಸಿಎಲ್ ನೀಡಿದೆ.
ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, ನಮ್ಮ ಮೆಟ್ರೋ ದಿನಾಂಕ 02, 10, 18, ಹಾಗೂ 24ನೇ ಏಪ್ರಿಲ್ ಮತ್ತು 03, 13 ಹಾಗೂ 17ನೇ ಮೇ, 2025 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮರುದಿನ ಮುಂಜಾನೆ 12.30ರ ವರೆಗೆ ವಿಸ್ತರಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ ಎಂಬುದಾಗಿ ಬಿ ಎಂ ಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Good News: ದಕ್ಷಿಣ ಭಾರತದ ಅತಿ ದೊಡ್ಡ ‘ಅಂಗಾಂಗ ಮರು ಪಡೆಯುವ ಕೇಂದ್ರ’ ಬೆಂಗಳೂರಿನಲ್ಲಿ ಸ್ಥಾಪನೆ
BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ