ಬೆಂಗಳೂರು: ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಗೌರವಾರ್ಥ ಇಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ನಮ್ಮ ಮೆಟ್ರೋ ಕಚೇರಿಗೂ ಸರ್ಕಾರಿ ರಜೆಯನ್ನು ಘೋಷಿಸಿದೆ. ಆದರೇ ನಮ್ಮ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂಬುದಾಗಿ ಬಿಎಂ ಆರ್ ಸಿ ಎಲ್ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ(BMRCL), ಮೆಟ್ರೋ ಕಾರ್ಯಾಚರಣೆಗಳು ಅತ್ಯಗತ್ಯ ಸೇವೆಯಾಗಿದೆ. ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾಳೆ ಸಾಮಾನ್ಯ ವೇಳಾಪಟ್ಟಿಯ ಪ್ರಕಾರ ಮೆಟ್ರೋ ಚಲಿಸುತ್ತದೆ ಎಂಬುದಾಗಿ ತಿಳಿಸಿದೆ.
ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ಇಂದು ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೆ ರಜೆ ಘೋಷಣೆ
ರಾಜ್ಯ ಸರ್ಕಾರದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ಇಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೂ ಬಿಎಂಆರ್ ಸಿಎಲ್ ರಜೆ ಘೋಷಿಸಿ ಆದೇಶಿಸಿದೆ.
ಈ ಸಂಬಂಧ ಕಚೇರಿ ಆದೇಶವನ್ನು ಹೊರಡಿಸಿರುವಂತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು, ದಿನಾಂಕ 10.12.2024ರಂತೆ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್ ಎಂ ಕೃಷ್ಣ ರವರ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಪ್ರಕಟಿಸಿದೆ ಎಂದಿದೆ.
ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ ಎಂದು ಹೇಳಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ:11.12.2024ರ ಬುಧವಾರದಂದು ಕಚೇರಿಗೆ ರಜೆಯನ್ನು ಘೋಷಿಸಿದೆ. ಆದರೇ ಮೆಟ್ರೋ ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಇಂದು ಎಂದಿನಂತೆ ಇರಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದೆ.
KPSCಯಿಂದ ವಿವಿಧ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ | KPSC Exams
ರಾಜ್ಯ ಸರ್ಕಾರದಿಂದ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ‘ಅತಿಥಿ ಶಿಕ್ಷಕ’ರಿಗೆ ಬಿಗ್ ಶಾಕ್