ಬೆಂಗಳೂರು : ಪೀಣ್ಯ ನಾಗಸಂದ್ರ ನಡುವೆ ಇಂದಿನಿಂದ ಮೂರು ದಿನ ನಮ್ಮ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಬಿಎಮ್ಆರ್‌ಸಿಎಲ್ ಮಾಹಿತಿ ನೀಡಿದೆ ಜನವರಿ 29 ರ ಮುಂಜಾನೆ ಐದರಿಂದ ಎಂದಿನಂತೆ ನಮ್ಮ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದೆ..
ನಾಗಸಂದ್ರ ಮತ್ತು ಮಾದಾವರದಿಂದ ಮಾರ್ಗ ವಿಸ್ತರಣೆಗೆ ಸಂಬಂಧಿಸಿದ ವಿದ್ಯುತ್ ಕಾಮಗಾರಿಗಳಿಗೆ ಅನುಕೂಲವಾಗುವಂತೆ ಹಸಿರು ಮಾರ್ಗದಲ್ಲಿ ಜನವರಿ 26, 27 ಮತ್ತು 28 ರಂದು ಸಿಲ್ಕ್ ಇನ್‌ಸ್ಟಿಟ್ಯೂಟ್ ಮತ್ತು ಪೀಣ್ಯ ಇಂಡಸ್ಟ್ರಿ ನಡುವೆ ಮಾತ್ರ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಜಾಲಹಳ್ಳಿ, ದಾಸರಹಳ್ಳಿ ಮತ್ತು ನಾಗಸಂದ್ರ ಮೆಟ್ರೊ ನಿಲ್ದಾಣಗಳಿಗೆ ತೆರಳುವ ಪ್ರಯಾಣಿಕರಿಗೆ ವ್ಯತ್ಯಯ ಉಂಟಾಗಲಿದೆ. ಚಲ್ಲಘಟ್ಟದಿಂದ ವೈಟ್‌ಫೀಲ್ಡ್ (ಕಾಡುಗೋಡಿ) ವರೆಗೆ ಸಾಗುವ ನೇರಳೆ ಮಾರ್ಗದ ರೈಲು ಕಾರ್ಯಾಚರಣೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಮೂರು ದಿನಗಳಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿಯನ್ನು ನಿರೀಕ್ಷಿಸಲಾಗಿದೆ ಎಂದು BMRCL ಪ್ರಯಾಣಿಕರಿಗೆ WhatsApp ಅಥವಾ Namma Metro ಅಪ್ಲಿಕೇಶನ್‌ನಲ್ಲಿ QR ಟಿಕೆಟ್‌ಗಳನ್ನು ಖರೀದಿಸಲು ಕೇಳಿದೆ.