ಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಇಂದು ನಮೋ ಬ್ರಿಗೇಡ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಆದರೆ ಅದಕ್ಕೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ನಿಷೇಧ ಹೇರಲಾಗಿದೆ ಎಂದು ತಿಳಿದು ಬಂದಿದೆ.
ಜಿಲ್ಲೆಗೆ ಬರದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ನಿಷೇಧ ಹೇರಲಾಗಿದೆ. ಚಿತ್ತಾಪುರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಮಾಡಿದ್ದೂ, ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಪ್ರಿಯಾಂಕ ಖರ್ಗೆ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ಹೊರ ಹಾಕಿದ್ದಾರೆ.
2023-24ರ ವಾರ್ಷಿಕ ಆಟಗಾರರ ರಿಟೈನರ್ಶಿಪ್ ಅನ್ನು ಪ್ರಕಟಿಸಿದ ‘ಬಿಸಿಸಿಐ’
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಫೈಟರ್ ಅಂತ ತಿಳಿದಿದ್ದೆ. ಆದರೆ ನನ್ನನ್ನು ಕಲಬುರ್ಗಿ ಜಿಲ್ಲೆ ಒಳಗೆ ಬರದಂತೆ ತಡೆಯುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಹಿಟ್ ಅಂಡ್ ರನ್ ಮಾಸ್ಟರ್ ಎಂದು ಸೂಲಿಬೆಲೆ ಕಿಡಿ ಕಾರಿದ್ದಾರೆ. ಇಂದು ಚಿತ್ತಾಪುರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮ ಆಯೋಜನೇ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಿತ್ತಾಪುರ ತಹಶೀಲ್ದಾರ್ ಚಕ್ರವರ್ತಿ ಸೂಲಿಬೆಲೆ ಆಗಮನಕ್ಕೆ ನಿಷೇಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾಡಿನಿಂದ ನಾಡಿಗೆ ಬಂದ ‘ಜಾಂಬವಂತ’ : ಶಿವಮೊಗ್ಗದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಪ್ರಾಣಾಪಾಯದಿಂದ ಪಾರು