ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ ಸಂಬಂಧ ನಾಳೆ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ನಾಳೆಯ ಮೋದಿ ಪ್ರಚಾರದ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆಸಲಾಗಿದ್ದು, ಚಿಕ್ಕಬಳ್ಳಾಪುರ ಬಳಿಯಲ್ಲಿ 50 ಎಕರೆ ಜಮೀನಿನಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಆ ಬಗ್ಗೆ ಮುಂದೆ ಓದಿ.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಾಳೆ ಚಿಕ್ಕಬಳ್ಳಾಪುರಕ್ಕೆ ನಮೋ ಎಂಟ್ರಿ ಕೊಡಲಿದ್ದಾರೆ. ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಅಲ್ಲದೇ ಕೋಲಾರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶಬಾಬು ಪರವಾಗಿಯೂ ನಮೋ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಹೀಗಿದೆ ನಾಳೆಯಮೋದಿ ಪ್ರಚಾರದ ಕಾರ್ಯಕ್ರಮದ ವಿವರ

ನಾಳೆ ಮಧ್ಯಾಹ್ನ 3.30ಕ್ಕೆ ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಪ್ರಚಾರ ಕಾರ್ಯಕ್ರಮದ ಪೆಂಡಾಲ್ ಬಳಿಗೆ ತೆರಳಲಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಆಗಲಗುರ್ಕಿ ಬಳಿಯ ಸುಮಾರು 50 ಎಕರೆ ಜಮೀನಿನಲ್ಲಿ ಆಯೋಜಿಸಿರುವಂತ ಲೋಕಸಭಾ ಚನಾವಮಾ ಪ್ರಚಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮೋದಿ ಪ್ರಚಾರ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು 50 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ 30ಕ್ಕೂ ಹೆಚ್ಚು ಶೌಚಾಲಯ, ಬೃಹತ್ ಎಲ್ಇಡಿ ಸ್ಕ್ರೀನ್ ಪರದೆಯನ್ನು ಅಳವಡಿಸಲಾಗಿದೆ.

ಸುಮಾರು 45 ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ. ಮೋದಿ ಕಾರ್ಯಕ್ರಮಕ್ಕೆ ಕೇಂದ್ರ ವಲಯದ ಐಜಿಪಿಯವರ ನೇತೃತ್ವದಲ್ಲಿ ಎಸ್ಪಿ, ಎಎಸ್ ಪಿ ಸೇರಿದಂತೆ 450 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಮೋದಿಯವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಲಿದ್ದಾರೆ.

‘ನಕ್ಷತ್ರಗಳಿಗೆ ರಾಕೆಟ್ ಕಳುಹಿಸಿ’ : ಇರಾನ್ ಮೇಲೆ ಇಸ್ರೇಲ್ ಡ್ರೋನ್ ದಾಳಿ ನಂತ್ರ ‘ಎಲೋನ್ ಮಸ್ಕ್’ ರಹಸ್ಯ ಸಂದೇಶ

ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

 

Share.
Exit mobile version