ಚಾಮರಾಜನಗರ: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪ ಬಳಕೆ ಮಾಡಲಾಗುತ್ತಿದೆ. ಇದೀಗ ಮಲೆಮಹದೇಶ್ವರ ಸ್ವಾಮಿಯ ಲಡ್ಡು ಪ್ರಸಾದಕ್ಕೂ ನಂದಿನಿ ತುಪ್ಪ ಬಳಕೆ ಮಾಡಲು ಸರ್ಕಾರ ನಿರ್ಧರಿಸಿದೆ.
ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.
ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.
*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
*ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ ಕೈಗೊಳ್ಳಲಾಗಿದೆ.
2500 ರಿಂದ 4000 ಭಕ್ತರು ಒಟ್ಟಿಗೇ ಕುಳಿತು ನಿತ್ಯ ಪ್ರಸಾದ ಸ್ವೀಕರಿಸುವ ದಾಸೋಹ ಭವನ ನಿರ್ಮಿಸಲು ಪರಿಷ್ಕರಿಸಿದ ಯೋಜನೆ ಸಿದ್ದಪಡಿಸಿ ಪ್ರಸ್ತುತ ಪಡಿಸಲು ಸೂಚನೆ.
*ಮಹದೇಶ್ವರ ಸನ್ನಿದಿಗೆ ಬರುವ ಭಕ್ತರು ಶೂದ್ರ ಸಮುದಾಯದವರು, ಬಡವರು. ಇವರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡಬಾರದು.
*ಭಕ್ತಾಧಿಗಳಿಗೆ ಉತ್ತಮ ಕುಡಿಯುವ ನೀರು, ಶುಚಿತ್ವದ ಶೌಚಾಲಯ, ಸೌಂದರ್ಯೀಕರಣ, ಉಳಿಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜಿ ಮಾಡಿಕೊಳ್ಳಬಾರದು.
*ಹೆಚ್ಚಿನ ಸಂಖ್ಯೆಯ ಶೌಚಾಲಯಗಳನ್ನು ನಿರ್ಮಿಸಿ.
BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ