ಬೆಂಗಳೂರು: ಕೆಲ ದಿನಗಳ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುತ್ತಿರೋದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದ್ರೇ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು ಬ್ರೇಕ್ ಹಾಕಿದ್ದರು. ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು. ಸಿಎಂ ಸಲಹೆಯಂತೆ ನಿನ್ನೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ.
ಈ ಕುರಿತಂತೆ ನಿನ್ನೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ( KMF President Balachandra Jarkiholi ) ನೇತೃತ್ವದಲ್ಲಿ ನಂದಿನ ಉತ್ಪನ್ನಗಳ ( Nandini Product ) ದರ ಹೆಚ್ಚಳ ಸಂಬಂಧ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಹಲವು ಅಧಿಕಾರಿಗಳು, ನಾಯಕರು ಭಾಗಿಯಾಗಿದ್ದರು.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ ಸೌಲಭ್ಯವನ್ನು ರೈತರು ಪಡೆಯಲಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕೊನೆಗೂ ಅಳೆದು ತೂಗಿ ನಂದಿನ ಹಾಲು, ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ.
ವರದಿ : ವಸಂತ ಬಿ ಈಶ್ವರಗೆರೆ
BIG BREAKING NEWS: ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ವಿಧಿವಶ | Actor Vikram Gokhale passes away
33 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ. ಆರ್ಥಿಕ ಸಹಾಯ : ಸಿಎಂ ಬೊಮ್ಮಾಯಿ ಘೋಷಣೆ