ಬೆಂಗಳೂರು : ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಾಳೆಯಿಂದ ಈ ಪರಿಷ್ಕ್ರತ ದರ ಜಾರಿಯಾಗಲಿದ್ದು, ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈಗಾಗಲೇ ದಿನದಿತ್ಯ ವಸ್ತುಗಳ ಬೆಲೆ ಎರಿಕೆ ಶಾಕ್ ನಲ್ಲಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.ನಂದಿನಿ ಹಾಲಿನ ದರವನ್ನು ಶೀಘ್ರವೇ ಲೀಟರ್ ಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಇತ್ತೀಚೆಗೆತಿಳಿಸಿದ್ದರು. ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟ ರ್ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದರು.

ನಂದಿನಿ ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದಿದ್ದರು.

 

Share.
Exit mobile version