ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಇಂದಿನ ರಾಜ್ಯ ಸಚಿವ ಸಂಪು ಸಭೆಯಲ್ಲಿ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡುವಂತ ನಿರ್ಧಾರ ಕೈಗೊಳ್ಳಲಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ.
ಕೆಲ ದಿನಗಳ ಹಿಂದೆ ಕೆ ಎಂ ಎಫ್ ಜೊತೆಗೆ ಸಿಎಂ ಸಿದ್ಧರಾಮಯ್ಯ ಸಭೆ ನಡೆಸಿದ್ದರು. ಅಂದು ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಆ ಸಭೆಯ ಬಳಿಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳೋದಾಗಿ ತಿಳಿಸಿದ್ದರು.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ.
ದಿನೇ ದಿನೇ ರಾಜ್ಯದ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಆಗಿದೆ. ಮೆಟ್ರೋ, ಬಿಎಂಟಿಸಿ, ಕೆ ಎಸ್ ಆರ್ ಟಿಸಿ ಟಿಕೆಟ್ ದರದ ಬೆನ್ನಲ್ಲೇ ಈಗ ಜನ ಸಾಮಾನ್ಯರಿಗೆ ಬಿಗ್ ಶಾಕ್ ಎನ್ನುವಂತೆ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡಲಾಗಿದೆ.