ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ರೂ.5 ಹೆಚ್ಚಳ ಮಾಡುವುದು ಖಚಿತವಾಗಿದೆ. ಸರ್ಕಾರಕ್ಕೆ ಈಗಾಗಲೇ ಈ ವಿಷಯವನ್ನು ತಿಳಿಸಿರೋದಾಗಿ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಕೆಎಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು, ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಒತ್ತಡವಿದೆ. ಈಗಾಗಲೇ ಈ ಸಂಬಂಧ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು.
ನಂದಿನಿ ಹಾಲಿನ ದರ ಹೆಚ್ಚಳ ಸಂಬಂಧ ಹಾಲು ಒಕ್ಕೂಟಗಳ ಜೊತೆಗೆ ನಡೆಸಿದಂತ ಸಭೆಯಲ್ಲಿ 5 ರೂಪಾಯಿ ಹೆಚ್ಚಳ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಹೆಚ್ಚಳ ಮಾಡಿದ ಹಣವನ್ನು ರೈತರಿಗೆ ನೀಡುವಂತೆಯೂ ಚರ್ಚಿಸಲಾಗಿದೆ ಎಂದರು.
ರಾಜ್ಯ ಸರ್ಕಾರಕ್ಕೆ ಹಾಲು ಒಕ್ಕೂಟಗಳ ಸಭೆಯಲ್ಲಿ ಚರ್ಚಿಸಿದಂತ ವಿಚಾರಗಳನ್ನು ಗಮನಕ್ಕೆ ತರಲಾಗಿದೆ. ಆದರೇ ಸರ್ಕಾರದಿಂದ ಇದುವರೆಗೂ ಯಾವುದೇ ನಿರ್ಧಾರ ಹೊರಬಂದಿಲ್ಲ ಎಂಬುದಾಗಿ ತಿಳಿಸಿದರು.
BIG NEWS: ‘ಡಿಸಿಎಂ ಡಿಕೆ ಶಿವಕುಮಾರ್’ಗೆ ಮತ್ತೊಂದು ಸಂಕಷ್ಟ: ಭ್ರಷ್ಟಾಚಾರ ಸಂಬಂಧ ಲೋಕಾಯುಕ್ತ, CBI, EDಗೆ ದೂರು