ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಹೊಸ ಹಾಲು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಸ್ಥಳವನ್ನು ಗುರುತಿಸಿದೆ.
ಮಥುರಾ, ಆಗ್ರಾ, ಮೀರತ್ ಮತ್ತು ಅಲಿಗಢದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರಾಟಕ್ಕೆ ಸಂಬಂಧಿಸಿದಂತೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರು ಹತ್ರಾಸ್ನ ಸ್ಥಳೀಯ ಮಾರಾಟಗಾರರೊಂದಿಗೆ ಬುಧವಾರ ನಡೆಸಿದ ಸಭೆಯಲ್ಲಿ ಈ ವಿಷಯವನ್ನು ಪ್ರಕಟಿಸಿದರು.
ಮಾರ್ಚ್ 16 ರಿಂದ ನಂದಿನಿ ಹಾಲು ಮತ್ತು ಮೊಸರು ಮಾರಾಟಕ್ಕೆ ಅನುಕೂಲವಾಗುವಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ಶಿವಸ್ವಾಮಿ ಹೇಳಿದರು. ಮಾರ್ಚ್ ನಲ್ಲಿ ಜೈಪುರಕ್ಕೆ ವಿಸ್ತರಿಸಲು ಕೆಎಂಎಫ್ ಯೋಜಿಸುತ್ತಿದೆ.