‘ದಲಿತರ ಹಣ’ ಗ್ಯಾರಂಟಿ ಯೋಜನೆಗಳಿಗೆ ಬಳಸಿದ್ದಕ್ಕೆ ‘ಛಲವಾದಿ ನಾರಾಯಣಸ್ವಾಮಿ’ ಆಕ್ಷೇಪ

ಬಳ್ಳಾರಿ: ಒಂದು ಕೈಯಲ್ಲಿ ಕೊಟ್ಟಂತೆ ಮಾಡಿ ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವುದು ಈ ಕಾಂಗ್ರೆಸ್ ಪಕ್ಷದ ಜಾಯಮಾನ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಸಿದ್ದರಾಮಯ್ಯನವರು ಜನತಾದಳದಿಂದ ಬಂದು ಆ ವೃತ್ತಿಯನ್ನು ಇಲ್ಲಿ ಕಲಿತಿದ್ದಾರೆ ಎಂದು ಟೀಕಿಸಿದ್ದಾರೆ. ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯ ಸುಮಾರು ರೂ. 25,000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ದಲಿತರ ಹಣವನ್ನು ಸರಕಾರ ಅನ್ಯ ಉದ್ದೇಶಕ್ಕೆ … Continue reading ‘ದಲಿತರ ಹಣ’ ಗ್ಯಾರಂಟಿ ಯೋಜನೆಗಳಿಗೆ ಬಳಸಿದ್ದಕ್ಕೆ ‘ಛಲವಾದಿ ನಾರಾಯಣಸ್ವಾಮಿ’ ಆಕ್ಷೇಪ