Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂಬೈ ಮಹಾ ಮಳೆಗೆ ಸಿಲುಕಿದ ಬಿಗ್ ಬಿ ಬಂಗಲೆ: ಜಲಾವೃತಗೊಂಡ ‘ಪ್ರತೀಕ್ಷಾ’ | Watch video

20/08/2025 11:12 AM

Aadhaar is mandatory: ಇನ್ಮುಂದೆ DL, RCಗೂ ‘ಆಧಾರ್‌’ ಕಡ್ಡಾಯ

20/08/2025 10:58 AM

BREAKING: ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ | Bomb threat

20/08/2025 10:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನರೇಂದ್ರ ಮೋದಿ ಮತ್ತು ಅಮಿತ್ ಶಾ ಕರ್ನಾಟಕವನ್ನು ಹಾಗೂ ರೈತರನ್ನು ದ್ವೇಷಿಸುತ್ತಾರೆ: ಸಿಎಂ ಸಿದ್ದರಾಮಯ್ಯ
KARNATAKA

ನರೇಂದ್ರ ಮೋದಿ ಮತ್ತು ಅಮಿತ್ ಶಾ ಕರ್ನಾಟಕವನ್ನು ಹಾಗೂ ರೈತರನ್ನು ದ್ವೇಷಿಸುತ್ತಾರೆ: ಸಿಎಂ ಸಿದ್ದರಾಮಯ್ಯ

By kannadanewsnow0723/04/2024 2:29 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಹಾಗು ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇಂದಿನವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನವನ್ನು ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

BIGG NEWS: ಭಾರತದಲ್ಲಿ ಮಾರಾಟವಾಗುವ ಮಸಾಲೆಗಳ ಮಾದರಿಗಳನ್ನು ಪರೀಕ್ಷಿಸಲು FSSAI ಸೂಚನೆ!

BREAKING: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕವಿತಾ, ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಮೇ 7ರವರೆಗೆ ವಿಸ್ತರಣೆ

ಏಪ್ರಿಲ್ 26ಕ್ಕೆ ಲೋಕಸಭೆ ಚುನಾವಣೆ: ಮೈಸೂರಿನ ಪ್ರವಾಸಿ ತಾಣಗಳು ಬಂದ್!

ಅವರು ಇಂದು ವಿಧಾನಸೌಧ ಮುಂಭಾಗ ಇರುವ ಗಾಂಧಿ ಪ್ರತಿಮೆಯ ಎದುರು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಧರಣಿಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಸೆಪ್ಟೆಂಬರ್ 22 ರಂದು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಕೇಂದ್ರ ತಂಡ 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ಈ ಮಧ್ಯೆ ಸಚಿವ ಕೃಷ್ಣಭೈರೇಗೌಡ ಹಾಗು ಪ್ರಿಯಾಂಕ ಖರ್ಗೆ ಸಂಬಂಧ ಪಟ್ಟ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂಥ ಬರಗಾಲ ಎದುರಾಗಿದೆ. ಮನವಿ ಕೊಟ್ಟಿದ್ದರೂ ಕೂಡ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದು ಹೇಳಿದ್ದರು ಎಂದರು.

ಗ್ಯಾರಂಟಿಗಳಿಗೆ ಒಂದೇ ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ.
ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ ಬರಗಾಲಕ್ಕೆ ಅಲ್ಲ ಎಂದು ಇಬ್ಬರೂ ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದೇ ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ ಎಂದರು.

ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ.
ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ಭರಿಸಿದ್ದೇವೆ. 36000 ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52009 ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48000 ಹೆಕ್ಟೇರ್ ಪ್ರದೇಶ ಮಳೆ ಇಲ್ಲದೇ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2000 ರೂ.ಗಳ ವರೆಗೆ 34 ಲಕ್ಷ ರೈತರಿಗೆ ನೀಡಲಾಗಿದೆ. 650 ಕೋಟಿ ರೂ.ಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ.

ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ

18172 ಕೋಟಿ ಗಳನ್ನೂ ಕೇಂದ್ರಕ್ಕೆ ಎನ್.ಡಿ.ಆರ್.ಎಫ್ ನಿಂದ ಬಿಡುಗಡೆ ಮಾಡುವಂತೆ ಕೋರಿ ಒತ್ತಾಯ ಮಾಡಿದ್ದೇವೆ. ಇದನ್ನು ಮಂಡಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಬಿಡುಗಡೆ ಮಾಡುವಂತೆ ಹೇಳುವುದಾಗಿ ಹೇಳಿದ್ದರು. ನಂತರ ನಾನು ಕೃಷ್ಣಭೈರೇಗೌಡ ಡಿಸೆಂಬರ್ 20 ತಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಡಿಸೆಂಬರ್ 23ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿ ಈವರೆಗೆ ಏನೂ ಮಾಡಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ. ರಾಜ್ಯಕ್ಕೆ ಮೇಲಿನಿಂದ ಮೇಲೆ ಬರಲು ಯಾವುದೇ ನೈತಿಕತೆ ಇಲ್ಲ ಎಂದು ಹೇಳಿ ಪ್ರತಿಭಟಿಸಿ ಅವರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದರು.

ಗೊ ಬ್ಯಾಕ್ ನರೇಂದ್ರ ಮೋದಿ ಅಮಿತ್ ಶಾ
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ನಲ್ಲಿಯೇ ಹೇಳಿದರು. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್ ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿ ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15 ನೆ ಹಣಕಾಸು ಆಯೋಗ 5495 ಕೋಟಿ ವಿಶೇಷ ಅನುದಾನವನ್ನು ಕೊಡಲಿಲ್ಲ. ಕೊಡದೇ ಈರಲು ಕಾರಣ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ಮೋದಿ ಅವರು. ಪೆರಿ ಫೆರಲ್ ರಿಂಗ್ ರೋಡ್ ಗೆ 3000 ಕೋಟಿ ಹಾಗು ಬೆಂಗಳೂರಿನ ಅಭಿವೃದ್ಧಿಗೆ 3000ಕೋಟಿ ಕೊಡಿ ಎಂದು ಶಿಫಾರಸು ಮಾಡಿದ್ದರೂ ಕೊಡಲಿಲ್ಲ. ಬರಪರಿಹಾರಕ್ಕೂ ಒಂದು ರೂ.ಇಲ್ಲ. ನರೇಂದ್ರ ಮೋದಿ ಅವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದರು.

ಅಮಿತ್ ಶಾ ಬರಪರಿಹಾರ ಕೊಟ್ಟು ರಾಜ್ಯಕ್ಕೆ ಬರಲಿ
ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18171 ಕೋಟಿ ಕೊಟ್ಟು ಆಮೇಲೆ ರಾಜ್ಯಕ್ಕೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದರು.

ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಸ್ಥಿತಿ

ರಾಜ್ಯ ಸರ್ಕಾರ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಪರಿಸ್ಥಿತಿ ಬಂತು. ಅಲ್ಲಿ ಅಟಾರ್ನಿ ಜನರಲ್ ಅವರು ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಸುಳ್ಳಿನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ತೆರಿಗೆ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದ ಹಾಗೂ ಸತ್ಯಾಂಶವನ್ನು ಮಂಡಿಸಿದ್ದರಿಂದ ಕರ್ನಾಟಕದ ಮೇಲೆ ಕರುಣೆ ತೋರಿತು. ಸರ್ವೋಚ್ಚ ನ್ಯಾಯಾಲಯ ನಮ್ಮ ಪರವಾಗಿ ಕರುಣೆ ತೋರಿದೆ ಎಂದರು. ಒಂದು ವೇಳೆ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೇ ಹೋಗಿದ್ದರೆ ಒಂದು ರೂ.ಪರಿಹಾರ ನೀಡುತ್ತಿರಲಿಲ್ಲ ಎಂದರು.

ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ
ರಾಜ್ಯದ ಪರವಾಗಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಾರತೀಯ ಚೆಂಬು ಪಕ್ಷದ ಸುಳ್ಳುಗಳನ್ನು ಜನತೆಗೆ ತೋರಿಸುತ್ತೇವೆ ಎಂದರು. ಈಗಾಗಲೇ ಸರ್ವೋಚ್ಚ ನ್ಯಾಯಾಲಯಕ್ಕೇ ಹೋಗಿದ್ದೇವೆ. ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ಭಾರತದ ಇತರೆಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ ಎಂದು ರಂದೀಪ್ ಸುರ್ಜೀವಾಲ ಹೇಳಿದರು.

ಅನ್ಯಾಯ ಸಹಿಸಲು ಸಾಧ್ಯವಿಲ್ಲ
ರಾಜಕೀಯ ಸಂಘರ್ಷ ಮುಂದುವರೆದರೆ ರಾಜ್ಯಕ್ಕೆ ಬರಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇಲ್ಲವೇ ತೊಂದರೆಯಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ನ್ಯಾಯ ಕೊಡಲಿ. ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದರು.

ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ, ಸಚಿವರಾದ ಕೃಷ್ಣಭೈರೇಗೌಡ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ,ಬೈರತಿ ಸುರೇಶ್, ಉಪಸ್ಥಿತರಿದ್ದರು.

Narendra Modi and Amit Shah hate Karnataka and farmers: Siddaramaiah ನರೇಂದ್ರ ಮೋದಿ ಮತ್ತು ಅಮಿತ್ ಶಾ ಕರ್ನಾಟಕವನ್ನು ಹಾಗೂ ರೈತರನ್ನು ದ್ವೇಷಿಸುತ್ತಾರೆ: ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ಗೆ ಮತ್ತೊಬ್ಬರು ಬಲಿ : ಬಸ್ ಹರಿದು ಪ್ರಯಾಣಿಕ ಸಾವು.!

20/08/2025 9:22 AM1 Min Read

ಅಮಾವಾಸ್ಯೆಯ ದಿನ ಕತ್ತರಿಸಿದ ಉಗುರನ್ನು ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

20/08/2025 9:18 AM2 Mins Read

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು `MBBS’ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

20/08/2025 8:54 AM1 Min Read
Recent News

ಮುಂಬೈ ಮಹಾ ಮಳೆಗೆ ಸಿಲುಕಿದ ಬಿಗ್ ಬಿ ಬಂಗಲೆ: ಜಲಾವೃತಗೊಂಡ ‘ಪ್ರತೀಕ್ಷಾ’ | Watch video

20/08/2025 11:12 AM

Aadhaar is mandatory: ಇನ್ಮುಂದೆ DL, RCಗೂ ‘ಆಧಾರ್‌’ ಕಡ್ಡಾಯ

20/08/2025 10:58 AM

BREAKING: ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ | Bomb threat

20/08/2025 10:31 AM

ಭ್ರಷ್ಟ ರಾಜಕಾರಣಿಗಳಿಗೆ ಬ್ರೇಕ್: ಪ್ರಧಾನಿ, ಮುಖ್ಯಮಂತ್ರಿಗಳ ಪದಚ್ಯುತಿಗೆ ಹೊಸ ಕಾನೂನು!

20/08/2025 10:13 AM
State News
KARNATAKA

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ಗೆ ಮತ್ತೊಬ್ಬರು ಬಲಿ : ಬಸ್ ಹರಿದು ಪ್ರಯಾಣಿಕ ಸಾವು.!

By kannadanewsnow5720/08/2025 9:22 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬಿಎಂಟಿಸಿ ಬಸ್ ಹರಿದು ಪ್ರಯಾಣೀಕ ಸಾವನ್ನಪ್ಪಿದ್ದಾರೆ. ಬೆಂಗಳೂರಿನ…

ಅಮಾವಾಸ್ಯೆಯ ದಿನ ಕತ್ತರಿಸಿದ ಉಗುರನ್ನು ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

20/08/2025 9:18 AM

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು `MBBS’ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

20/08/2025 8:54 AM

ಕಲಬುರಗಿಯಲ್ಲಿ 1826 ಕೋಟಿ ರೂ. ವೆಚ್ಚದಲ್ಲಿ `ಜವಳಿ ಪಾರ್ಕ್’ ಸ್ಥಾಪನೆ :1ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ.!

20/08/2025 8:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.