ಕೆಎನ್‌ಎನ್‌ಸಿನಿಮಾಡೆಸ್ಕ್: ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಚಿತ್ರದ ಮತ್ತೊಂದು ವೀಡಿಯೋ ಸಾಂಗ್ ಈಗ ಎಲ್ಲ ಕಡೆ ಸಖತ್ ಆಗಿ ಸೌಂಡ್ ಮಾಡ್ತೀದೆ. ಸದ್ಯ ಕನ್ನಡದ ‘ಸಾರಾಂಶ’ ಸಿನಿಮಾ (Saramsha Movie) ಟೀಮ್ ಕೂಡ ಡಿಫರೆಂಟ್ ಆಗಿರುವ ನಶೆಯೋ ನಕಾಶೆಯೊ ಹಾಡಿನ ವಿಡಿಯೋವನ್ನು ಜನರ ಮುಂದಿಟ್ಟಿದೆ.
ಕಾಂತಾರ ಖ್ಯಾತಿಯ ಪ್ರಮೋದ್ ಮರವಂತೆ ಸಾಹಿತ್ಯ ಮತ್ತು ಉದಿತ್ ಹರಿತಾಸ್ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಹಾಡು ರಾಮ್ ಕುಮಾರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ನಶೆಯೋ ನಕಾಶೆಯೊ ಈ ಹಾಡಿನ ಹಿಂದಿರುವ ಮುಖ್ಯ ಮಾಯೆ. ಆ ಕ್ಷಣಕ್ಕೆ ವಾಸ್ತವಿಕ ಪರಿಧಿಯಾಚೆ ಕೊಂಡೊಯ್ಯುವ, ಅಸಾಧ್ಯವಾದುದನ್ನೂ ಕೂಡಾ ಸಾಧ್ಯವಾಗುವಂತೆ ಮಾಡುವ ಶಕ್ತಿ ಕನಸಿಗಿದೆ ಎನ್ನುವ ಧೈರ್ಯವನ್ನು ಈ ಹಾಡಿನ ಮೂಲಕ ನೋಡಬಹುದಾಗಿದೆ.
ಈ ಸಿನಿಮಾಗೆ ಸೂರ್ಯ ವಸಿಷ್ಠ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ದೀಪಕ್ ಸುಬ್ರಮಣ್ಯ, ಶೃತಿ ಹರಿಹರನ್, ಸೂರ್ಯ ವಸಿಷ್ಠ ಹಾಗೂ ಶ್ವೇತಾ ಗುಪ್ತ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರಾಮ್ ಮಂಜುನಾಥ್, ರವಿ ಭಟ್, ಪೃಥ್ವಿ ಬನವಾಸಿ, ಸತೀಶ್ ಕುಮಾರ್ ಮುಂತಾದ ಕಲಾವಿದರು ಕೂಡ ಈ ಚಿತ್ರದಲ್ಲಿ ಇದ್ದಾರೆ. ನಿರ್ದೇಶಕ ಸೂರ್ಯ ವಸಿಷ್ಠ ಹಾಗೂ ‘ಗಂಟುಮೂಟೆ’ ಖ್ಯಾತಿಯ ರೂಪಾ ರಾವ್ ಅವರು ಸಂಭಾಷಣೆ ಬರೆದಿದ್ದಾರೆ. . ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ.