ಕೆಎನ್‌ಎನ್‌ಸಿನಿಮಾಡೆಸ್ಕ್‌: ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಚಿತ್ರದ ಮತ್ತೊಂದು ವೀಡಿಯೋ ಸಾಂಗ್ ಈಗ ಎಲ್ಲ ಕಡೆ ಸಖತ್‌ ಆಗಿ ಸೌಂಡ್ ಮಾಡ್ತೀದೆ. ಸದ್ಯ ಕನ್ನಡದ ‘ಸಾರಾಂಶ’ ಸಿನಿಮಾ (Saramsha Movie) ಟೀಮ್​ ಕೂಡ ಡಿಫರೆಂಟ್​ ಆಗಿರುವ ನಶೆಯೋ ನಕಾಶೆಯೊ ಹಾಡಿನ ವಿಡಿಯೋವನ್ನು ಜನರ ಮುಂದಿಟ್ಟಿದೆ.

ಕಾಂತಾರ ಖ್ಯಾತಿಯ ಪ್ರಮೋದ್ ಮರವಂತೆ ಸಾಹಿತ್ಯ ಮತ್ತು ಉದಿತ್ ಹರಿತಾಸ್ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಹಾಡು ರಾಮ್ ಕುಮಾರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ನಶೆಯೋ ನಕಾಶೆಯೊ ಈ ಹಾಡಿನ ಹಿಂದಿರುವ ಮುಖ್ಯ ಮಾಯೆ. ಆ ಕ್ಷಣಕ್ಕೆ ವಾಸ್ತವಿಕ ಪರಿಧಿಯಾಚೆ ಕೊಂಡೊಯ್ಯುವ, ಅಸಾಧ್ಯವಾದುದನ್ನೂ ಕೂಡಾ ಸಾಧ್ಯವಾಗುವಂತೆ ಮಾಡುವ ಶಕ್ತಿ ಕನಸಿಗಿದೆ ಎನ್ನುವ ಧೈರ್ಯವನ್ನು ಈ ಹಾಡಿನ ಮೂಲಕ ನೋಡಬಹುದಾಗಿದೆ.

ಈ ಸಿನಿಮಾಗೆ ಸೂರ್ಯ ವಸಿಷ್ಠ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ದೀಪಕ್ ಸುಬ್ರಮಣ್ಯ, ಶೃತಿ ಹರಿಹರನ್​, ಸೂರ್ಯ ವಸಿಷ್ಠ ಹಾಗೂ ಶ್ವೇತಾ ಗುಪ್ತ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರಾಮ್ ಮಂಜುನಾಥ್, ರವಿ ಭಟ್, ಪೃಥ್ವಿ ಬನವಾಸಿ, ಸತೀಶ್ ಕುಮಾರ್ ಮುಂತಾದ ಕಲಾವಿದರು ಕೂಡ ಈ ಚಿತ್ರದಲ್ಲಿ ಇದ್ದಾರೆ. ನಿರ್ದೇಶಕ ಸೂರ್ಯ ವಸಿಷ್ಠ ಹಾಗೂ ‘ಗಂಟುಮೂಟೆ’ ಖ್ಯಾತಿಯ ರೂಪಾ ರಾವ್ ಅವರು ಸಂಭಾಷಣೆ ಬರೆದಿದ್ದಾರೆ. . ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ.

Share.
Exit mobile version