ಬೆಂಗಳೂರು: ನವೆಂಬರ್ 11, 12 ಮತ್ತು 13ರಂದು ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಬೆಂಗಳೂರಿನ ಮಾಗಡಿ ರಸ್ತೆಯ ಜನಸೇವಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನದಲ್ಲಿ ಭಾಗವಹಿಸುವಂತ ಶಾಲಾ-ಕಾಲೇಜು ಶಿಕ್ಷಕರಿಗೆ ( School and College Teacher ) ಅನ್ಯ ಕಾರ್ಯ ನಿಮಿತ್ತ ರಜೆಯನ್ನು ನೀಡಿ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
ರಾಹುಲ್ ಗಾಂಧಿ ಚುನಾವಣೆಯಿಲ್ಲದೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಹೇಗೆ ? : ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘವು ನವೆಂಬರ್ 11, 12 ಮತ್ತು 13ರಂದು ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಹಮ್ಮಿಕೊಂಡಿದೆ ಎಂದಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯ, ಜನಸೇವಾ ಕೇಂದ್ರ, ಚನ್ನೇನಹಳ್ಳಿಯಲ್ಲಿ ಈ ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಆಯೋಜಿಸಲಾಗಿದೆ. ಈ ಶೈಕ್ಷಣಿಕ ಸಮ್ಮೇಳನದಲ್ಲಿ ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಪ್ರಧಾನ ವಿಷಯವಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಿಎಂ ಬೊಮ್ಮಾಯಿ ಕೂಡ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮವು ಶಿಕ್ಷಕರಿಗೊಂದು ಉಪಯುಕ್ತ ಕಾರ್ಯಕ್ರಮವಾಗಿದ್ದು, ಶೈಕ್ಷಣಿಕ ಸಮ್ಮೇಳನದಲ್ಲಿ ಭಾಗವಹಿಸುವ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪದವಿ ಪೂರ್ವ ಶಿಕ್ಷಣದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರುಗಳಿಗೆ ನವೆಂಬರ್ 11, 12 ಮತ್ತು 13ರಂದು ಅನ್ಯ ಕರ್ತವ್ಯ ನಿಮಿತ್ತ ಎಂದು ಪರಿಗಣಿಸಲು ಸರ್ಕಾರ ಮಂಜೂರಾತಿ ನೀಡಿದೆ ಎಂದು ಹೇಳಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ