ಬೆಂಗಳೂರು : ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ರಾಜ್ಯದ ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ ಎಂದು ಸರ್ಕಾರ ಹೈಕೋರ್ಟ್ಗೆ ಸ್ಪಷ್ಟಿಕರಣ ನೀಡಿದೆ.
ಹೌದು ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2023ರ ಸೆ.25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ .ದೀಕ್ಷಿತ್ ಅವರ ಪೀಠಕ್ಕೆ ಸರ್ಕಾರಿ ವಕೀಲರು ಈ ಸ್ಪಷ್ಟನೆ ನೀಡಿದರು.
ಬಿಸಿಲಿನ ಬೇಗೆಗೆ ತತ್ತರಿಸಿರುವ ಜನಸಾಮಾನ್ಯರಿಗೆ ಬಿಗ್ ಶಾಕ್ : ತರಕಾರಿ, ಮಾಂಸ ಬೆಲೆ ಗಗನಕ್ಕೆ!
ಸರ್ಕಾರದ ಸ್ಪಷ್ಟೀಕರಣವನ್ನು ಆಲಿಸಿದ ನ್ಯಾಯಾಲಯ, ನಾಡಗೀತೆಯನ್ನು ನಿರ್ದಿಷ್ಟ ರಾಗದಲ್ಲಿ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಯಾವುದೇ ಶಾಸನವಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ., ಹಾಗಾದರೆ, ಇಂತಹ ಆದೇಶ ಹೊರಡಿಸಲು ಸರ್ಕಾರ ಯಾವ ಶಾಸನಾತ್ಮಕ ಅಧಿಕಾರ ಹೊಂದಿದೆ ಎಂದು ಪ್ರಶ್ನಿಸಿತು. ಸರ್ಕಾರದ ವಕೀಲರು, ಈ ಕುರಿತು ರಾಜ್ಯ ಸರ್ಕಾರದಿಂದ ಅಗತ್ಯ ಮಾಹಿತಿ ಪಡೆದು ವಿವರಣೆ ನೀಡಲಾಗುವುದು ಎಂದು ಭರವಸೆ ನೀಡಿದರು.
ನಾಡಗೀತೆ ಸಾಂವಿಧಾನಿಕವಾಗಿ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ನಾಡಗೀತೆ ವಿಚಾರದಲ್ಲಿ ರಾಜ್ಯ ಸರ್ಕಾರ ಏಕೆ ಹೀಗೆ ಗೊಂದಲ ಆದೇಶಗಳನ್ನು ಹೊರಡಿಸುತ್ತಿದೆ? ಒಂದು ಆದೇಶ ಹೊರಡಿಸಿ ನಂತರ ಅದನ್ನು ಹಿಂಪಡೆದು ತಿದ್ದುಪಡಿ ಆದೇಶ ಹೊರಡಿಸುತ್ತಿದೆ. ಇನ್ನೂ ನಿರ್ದಿಷ್ಟ ರಾಗದಲ್ಲಿನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಸಂವಿಧಾನದ ಅಥವಾ ಇತರೆ ಶಾಸನದ ಬೆಂಬಲವಿರಬೇಕು. ಸರ್ಕಾರ ವಿವೇಚನಾಧಿಕಾರ ಬಳಸಿ ಕಾರ್ಯಕಾರಿ ಆದೇಶ ಹೊರಡಿಸಲಾಗದು. ಈ ಬಗ್ಗೆ ಸಮಗ್ರವಾದ ವಿವರಣೆ ಎಂದು ಸೂಚಿಸಿ ವಿಚಾರಣೆಯನ್ನು ಏ.10ಕ್ಕೆ ವಿಚಾರಣೆ ಮುಂದೂಡಿತು.