ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವಾಲಯದಿಂದ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ-2024 ಅನ್ನು ಪ್ರಕಟಿಸಲಾಗಿದೆ. ಈ ಗರಿಮೆಗೆ ಕರ್ನಾಟಕ ಇಬ್ಬರು ಶಿಕ್ಷಕರು ಪಾತ್ರರಾಗಿದ್ದಾರೆ.
ಈ ಕುರಿತಂತೆ ಕೇಂದ್ರ ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ 2024ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. 2024ರಲ್ಲಿ 50 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕಟಿಸಿರುವಂತ ರಾಷ್ಟ್ರೀಯ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಕರ್ನಾಟಕದ ಇಬ್ಬರು ಶಿಕ್ಷಕರು ಪಡೆದಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರಿನ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಹೆಚ್.ಎನ್ ಗಿರೀಶ್ ಅವರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಬಂದಿದೆ. ಇವರಲ್ಲದೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ.ಆರ್ ಅವರಿಗೂ ಸಂದಿದೆ.