ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ 700 ಮಹಿಳೆಯರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಯಾವುದೇ ದೂರು ನೀಡಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಹೇಳಿದೆ.
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 700 ಮಹಿಳೆಯರು ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ ಎಂಬ ವರದಿಗಳು ಸುಳ್ಳು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಸ್ಪಷ್ಟಪಡಿಸಿದೆ.
ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ತಮ್ಮ ಪುತ್ರನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗುರುವಾರ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದರು.