ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಆ.11ರಿಂದ 17ರವರೆಗೆ ಹಮ್ಮಿಕೊಂಡಿರುವ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಮತ್ತು ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳ ವ್ಯಾಪ್ತಿಯಲ್ಲಿ (ಡಿಸಿಟಿಇ) ಯಶಸ್ವಿಗೊಳಿಸಲು ಸುತ್ತೋಲೆ ಹೊರಡಿಸಲಾಗಿದೆ. “ಹರ್ ಘರ್ ತಿರಂಗಾ” ಅಭಿಯಾನದಡಿ ದೇಶದ ಮನೆಮನೆಯಲ್ಲೂ ರಾಷ್ಟ್ರಧ್ಜಜ ಹಾರಿಸಿ ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಕರೆ ಕೊಡಲಾಗಿದೆ. ಇದಕ್ಕೆ ಪೂರಕವಾಗಿ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ವಿಶ್ವವಿದ್ಯಾನಿಲಯಗಳು, ಡಿಸಿಟಿಇ ಗೆ ಒಳಪಡುವ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿ ಕಾಲೇಜುಗಳು ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
Good News: ‘SC, ST ಸಮುದಾಯ’ದವರಿಗೆ ಗುಡ್ ನ್ಯೂಸ್: ಈ ಕೆಲಸಕ್ಕೆ ‘ಗ್ರಾಪಂ’ಯಿಂದ ಸಿಗುತ್ತೆ ‘5 ಸಾವಿರ ಸಹಾಯಧನ’
ತರಗತಿಗಳ ಸಮಯದಲ್ಲಿ ಈ ಬಗ್ಗೆ ತಿಳಿಸಬೇಕು, ಸೂಚನಾ ಫಲಕಗಳಲ್ಲಿ ಮಾಹಿತಿ ಹಾಕಬೇಕು, ಆಯಾ ಕಾಲೇಜುಗಳ ವಾಹನಗಳ ಮೇಲೆ ಧ್ವಜ ಅಳವಡಿಸಲು ತಿಳಿಸಬೇಕು ಹಾಗೂ ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಪ್ರತಿ ವಾರದ ಕೊನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್ ಸೈಟ್ kanbahvblr@gmail.comಗೆ ಅಪ್ ಲೋಡ್ ಮಾಡಬೇಕು ಎಂದು ಸೂಚಿಸಲಾಗಿದೆ.
CBSE 10th Result 2022: ಇಂದು ಸಿಬಿಎಸ್ಇ ಫಲಿತಾಂಶ ಪ್ರಕಟ: ಈ ವಿಧಾನ ಅನುಸರಿಸಿ, ಫಲಿತಾಂಶ ವೀಕ್ಷಿಸಿ
ತಂತಮ್ಮ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಲು ಬೋಧಕರು, ಬೋಧಕೇತರರು, ವಿದ್ಯಾರ್ಥಿಗಳನ್ನು ಮತ್ತು ಸಂಸ್ಥೆಗಳ ವಾಹನ ಚಾಲಕರನ್ನು ಪ್ರೇರೇಪಿಸಬೇಕು. ಕೇಂದ್ರ ಸರ್ಕಾರದ amritmahotsav.nic.in ಜಾಲತಾಣದಲ್ಲಿ “ಹರ್ ಘರ್ ತಿರಂಗಾ” ಅಡಿಯಲ್ಲಿ ಈ ಸಂಬಂಧವಾಗಿ ಇರುವ ಬ್ಯಾನರ್ ಮತ್ತು ಪೋಸ್ಟರ್ ಗಳ ಮಾದರಿಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ಸಚಿವರು ಹೇಳಿದ್ದಾರೆ.