ನವದೆಹಲಿ: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಂದು (ಏಪ್ರಿಲ್ 20, 2026) ದೆಹಲಿ ಹೈಕೋರ್ಟ್ ಮಹತ್ವದ ವಿಚಾರಣೆ ನಡೆಸಲಿದೆ. ಈ ಹಿಂದೆ ವಿಚಾರಣಾ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಮಾನ್ಯ ಮಾಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಇಂದು ನಡೆಯಲಿದೆ.
ಡಿಸೆಂಬರ್ 16, 2025 ರಂದು ವಿಚಾರಣಾ ನ್ಯಾಯಾಲಯವು, “ಎಫ್‌ಐಆರ್ ದಾಖಲಾಗದೆಯೇ ಮನಿ ಲಾಂಡರಿಂಗ್ ಅಡಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿ ಇಡಿಯ ಚಾರ್ಜ್‌ಶೀಟ್ ಅನ್ನು ತಿರಸ್ಕರಿಸಿತ್ತು. ಈ ಆದೇಶವು ಕಾನೂನುಬಾಹಿರ ಎಂದು ಇಡಿ ಈಗ ಹೈಕೋರ್ಟ್ ಮೆಟ್ಟಿಲೇರಿದೆ.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಲ್ಲದೆ, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ‘ಯಂಗ್ ಇಂಡಿಯನ್’ ಕಂಪನಿಯ ವಿರುದ್ಧವೂ ನೋಟಿಸ್ ನೀಡಲಾಗಿದೆ.ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ನೇತೃತ್ವದ ಪೀಠವು ಈ ಅರ್ಜಿಯ ವಿಚಾರಣೆ ನಡೆಸಲಿದೆ.








