ಕಲಬುರ್ಗಿ:”ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಇಡಿ ಸಲ್ಲಿಸಿರುವ ಆರೋಪಪಟ್ಟಿಯ ಯಾವುದೇ ವಿಚಾರಗಳಿಗೆ ಸರಿಯಾದ ಆಧಾರವಿಲ್ಲ. ಇದು ಅನ್ಯಾಯ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕಲಬುರ್ಗಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದಲ್ಲಿ ಯಾವುದೇ ರೀತಿಯಲ್ಲಿಯೂ ಗಾಂಧಿ ಕುಟುಂಬಕ್ಕೆ ಲಾಭವಾಗಿಲ್ಲ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಮತ್ತು ಅವರು ಪಕ್ಷದ ಮುಖ್ಯಸ್ಥರು, ಆದ್ದರಿಂದ ಅವರ ಹೆಸರು ಉಲ್ಲೇಖವಾಗಿದೆ. ಇದರಲ್ಲಿ ತಪ್ಪೇನಿದೆ? ಇದನ್ನು ಕೇವಲ ರಾಜಕೀಯ ದ್ವೇಷಕ್ಕಾಗಿ ಮಾಡಲಾಗುತ್ತಿದೆ” ಎಂದರು.