ಬೆಂಗಳೂರು: ಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಕ್ರಮ ವಹಿಸಲಾಗಿದೆ.
ನಮ್ಮ ದೇಶದಲ್ಲಿ 2011ರ ನಂತರ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲವಾದರೂ, ನಾವು ಮೈಮರೆಯುವಂತಿಲ್ಲ. ಪೋಲಿಯೋಗೆ ಕಾರಣವಾಗುವ ವೈರಸ್‌ಗಳು ನೆರೆಯ ಪಾಕಿಸ್ತಾನ, ಅಪಘಾನಿಸ್ತಾನ ದೇಶದಿಂದ ವಾತಾವರಣದಲ್ಲಿ ಸೇರಿಕೊಂಡು, ದೇಶದೊಳಗೆ ಬರುವ ಸಾಧ್ಯತೆಗಳಿರುತ್ತವೆ ಎಂಬುದಾಗಿ ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಜಗತ್ತಿನಿಂದಲೇ ಈ ಪೋಲಿಯೋ ವೈರಸ್ ನಿರ್ಮೂಲನೆಯಾಗುವವರೆಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ತಪ್ಪದೆ ಮಕ್ಕಳಿಗೆ ಹಾಕಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಲಸಿಕಾ ದಿನ ಎಲ್ಲಾ ಅಂಗನವಾಡಿ ಕೇಂದ್ರವನ್ನು ತೆರೆದಿಟ್ಟು ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು. ತಾಯಂದಿರ ಸಭೆ, ಬಾಲ ವಿಕಾಸ ಸಮಿತಿ ಸಭೆಗಳಲ್ಲಿ ಲಸಿಕಾ ದಿನಾಂಕದ ಕುರಿತು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಬೇಕು. ಲಸಿಕಾ ಕಾರ್ಯಕ್ರಮದಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಚಾರಕರು, ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು, ಇಲಾಖೆಯ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕು. ಅನಾಥಾಶ್ರಮಗಳಲ್ಲಿ ಇರುವ ಎಲ್ಲಾ ಮಕ್ಕಳಿಗೂ ಕೂಡ ಲಸಿಕೆ ಹಾಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಶಾಲೆಗಳು ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಪೋಲಿಯೋ ದಿನದ ಮುನ್ನಾ ದಿನವಾದ ಮಾರ್ಚ್ 02ರಂದು ಕೋವಿಡ್-19 ಮುನ್ನೆಚ್ಚರಿಕೆಯೊಂದಿಗೆ ಜಾಥಾ ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಮಾ.03ರ ಭಾನುವಾರದಂದು ಬೆಳಗ್ಗೆ 8 ಗಂಟೆಗೆ ಲಸಿಕಾ ಕಾರ್ಯಕ್ರಮವನ್ನು ಕೈಗೊಳ್ಳಲು ಶಾಲಾ ಕೊಠಡಿಗಳನ್ನು ತೆರೆದಿಡಬೇಕು. ಖಾಸಗಿ ಶಾಲೆಗಳಲ್ಲಿ ಪ್ಲೇ ಸ್ಕೂಲ್, ಎಲ್‌ಕೆಜಿ, ಯುಕೆಜಿ ಒಳಗೊಂಡಂತೆ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಪೋಷಕರನ್ನು ಪ್ರೇರೇಪಿಸುವಂತೆ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು