ಬೆಂಗಳೂರು: ಪಿಎಫ್ ಐ ಬ್ಯಾನ್ ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
BIG NEWS: PFI ನಿಷೇಧಕ್ಕೆ ಒತ್ತಾಯಿಸಿ ಹೋರಾಟವೂ ನಡೆದಿತ್ತು; ಆ ಫಲವಾಗಿ ಈಗ ಜಯ ಸಿಕ್ಕಿದೆ- ಬಿ.ಎಸ್ ಯಡಿಯೂರಪ್ಪ
ಮೋದಿ ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ ಸರ್ವೋಚ್ಛ ಆದ್ಯತೆಯಾಗಿದೆ. ನಮ್ಮ ದೇಶ ಸುರಕ್ಷತೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
BIG NEWS: PFI ನಿಷೇಧಕ್ಕೆ ಒತ್ತಾಯಿಸಿ ಹೋರಾಟವೂ ನಡೆದಿತ್ತು; ಆ ಫಲವಾಗಿ ಈಗ ಜಯ ಸಿಕ್ಕಿದೆ- ಬಿ.ಎಸ್ ಯಡಿಯೂರಪ್ಪ
ಪಿಎಸ್ಐ ಅಕ್ರಮ ಚಟುಟಿಕೆಗಳ ಬಗ್ಗೆ ಈ ಹಿಂದೆಯೇ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕೈವಾಡ ಇರುವ ಬಗ್ಗೆ ಆರೋಪಿಸಿದ್ದರು. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ, ಪ್ರಕರಣದಲ್ಲಿ ಪಿಎಫ್ಐ ಸಂಘಟನೆ ಕೈವಾಡವಿರುವ ಕುರಿತು ತನಿಖೆ ತೀವ್ರಗೊಳಿಸುವಂತೆ ಸೂಚಿಸಿದ್ದರು.