ಬೆಂಗಳೂರು: ಪ್ರತಿ ವರ್ಷ ಸೆಪ್ಟೆಂಬರ್ 5ರಂದು ಅತ್ಯುತ್ತಮ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದಂತ ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗುತ್ತದೆ. 2022ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ( National Teacher Award 2022 )  ಕೇಂದ್ರ ಸರ್ಕಾರದಿಂದ ಇಂದು ಪ್ರಕಟಿಸಲಾಗಿದೆ. 46 ಶಿಕ್ಷಕರಿಗೆ ಪ್ರಶಸ್ತಿಯ ಗರಿಮೆ ಸಂದಿದೆ. ಕರ್ನಾಟಕದ ಚಿತ್ರದುರ್ಗದ ಶಿಕ್ಷಕ ಟಿ.ಪಿ ಉಮೇಶ್ ( Teacher T P Umesh ) ಅವರಿಗೂ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅಭಿನಂದಿಸಿದ್ದಾರೆ.

BREAKING NEWS: ‘ಯುಎಸ್ ಓಪನ್’ನಿಂದ ಹಿಂದೆ ಸರಿದ ‘ನೊವಾಕ್ ಜೊಕೊವಿಕ್’ | Novak Djokovic

ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh )’ ಅವರು, ಸರ್ಕಾರಿ ಶಾಲೆಯಲ್ಲಿ ಪ್ರಯೋಗಾಲಯ, ಗ್ರಂಥಾಲಯ, ಡಿಜಿಟಲ್ ಕ್ಲಾಸ್ ಸ್ಥಾಪನೆ ಸೇರಿದಂತೆ ಶಾಲೆಯ ಸಮಗ್ರ ಅಭಿವೃದ್ಧಿಗೆ ನೀಡಿದ ಗಣನೀಯ ಸೇವೆಗಾಗಿ ‘ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2022′ ಭಾಜನರಾದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಅಮೃತಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಪಿ. ಉಮೇಶ್ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

Share.
Exit mobile version