ಉತ್ತರಕನ್ನಡ : ನೌಕಾನೆಲೆ ಸಮಾರಾಭ್ಯಾಸ ಹಿನ್ನೆಲೆಯಲ್ಲಿ ಅಕ್ಟೋಬರ್ 14 ರಿಂದ 16 ವರೆಗೆ ಮೂರು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.ಅಕ್ಟೋಬರ್ 14 ರಿಂದ 16 ರವರೆಗೆ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ನೇತ್ರಾಣಿ ದ್ವೀಪದಿಂದ 10 ನಾಟಿಕಲ್ ಮೈಲಿ ದೂರದಿಂದ ಸಮರಭ್ಯಾಸ ನಡೆಸಲಾಗುತ್ತದೆ.
ಆಗಸದಿಂದ ಯುದ್ಧ ಫೈಟರ್ ಮೂಲಕ ನೌಕಾದಳದಿಂದ ಸಮಾರಾಭ್ಯಾಸ ನಡೆಸಲಿದೆ. ಆಗಸದಿಂದ ನೇತ್ರಾಣಿ ದ್ವೀಪದಲ್ಲಿ ಫೈರಿಂಗ್ ನಡೆಯುವುದರಿಂದ ಈ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ನೇತ್ರಾಣಿ ದ್ವೀಪದಲ್ಲಿ ಮೀನುಗಾರರು ಹಾಗೂ ಪ್ರವಾಸಿಗರಿಗೆ ಮೂರು ದಿನ ನಿರ್ಬಂಧ ವಿಧಿಸಲಾಗಿದೆ.