ಇಸ್ಲಮಾಬಾದ್: ಇಂದು ನಡೆದಂತ ಪಾಕಿಸ್ತಾನ ಚುನಾವಣೆಯಲ್ಲಿ ನವಾಜ್ ಷರೀಫ್ ಅವರ ಪಿಎಂಎಲ್-ಎನ್ ಪಕ್ಷವು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಪಾಕ್ ಚುನಾವಣೆಯಲ್ಲಿ ಗೆಲುವಿನ ನಗೆಯನ್ನು ಬೀರಿರೋದಾಗಿ ವರದಿಗಳಿಂದ ತಿಳಿದು ಬಂದಿದೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ನಾಯಕ ನವಾಜ್ ಷರೀಫ್, “ನಾವು ನಿಮ್ಮೆಲ್ಲರನ್ನೂ ಅಭಿನಂದಿಸುತ್ತೇವೆ ಏಕೆಂದರೆ, ದೇವರ ಆಶೀರ್ವಾದದಿಂದ, ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತಿಯೊಂದು ಪಕ್ಷಕ್ಕೂ ನೀಡಿದ ಜನಾದೇಶವನ್ನು ನಾವು ಗೌರವಿಸುತ್ತೇವೆ. ಗಾಯಗೊಂಡ ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರಲು ನಮ್ಮೊಂದಿಗೆ ಕುಳಿತುಕೊಳ್ಳಲು ನಾವು ಅವರನ್ನು ಆಹ್ವಾನಿಸುತ್ತೇವೆ” ಎಂದು ಅವರು ಹೇಳಿದರು.
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಕ್ಷ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಚುನಾವಣೆಯಲ್ಲಿ ಗೆಲುವು ಸಾಧಿಸಿದೆ ಎಂದು ವರದಿಯಾಗಿದೆ.
ಲಾಹೋರ್ನ ಪಕ್ಷದ ಕಚೇರಿಯಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿರುವುದನ್ನು ಕಾಣಬಹುದು. ನವಾಜ್ ಷರೀಫ್ 1,71,024 ಮತಗಳನ್ನು ಪಡೆದು ಜಯಗಳಿಸಿದ್ದಾರೆ.