Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದ್ವಿಭಾಷಾ ನೀತಿಯತ್ತ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರ : `SSLC’ ಪರೀಕ್ಷೆಯಲ್ಲಿ ಹಿಂದಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’!

28/03/2026 6:40 AM

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM

ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ `IPL’ ಟೂರ್ನಿ ಆರಂಭ : RCB vs SRH ನಡುವೆ ಹೈವೋಲ್ಟೇಜ್ ಉದ್ಘಾಟನಾ ಪಂದ್ಯ!

28/03/2026 6:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾ.9ರಿಂದ 24ರವರೆಗೆ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ಚಾತ್ರೆ: AC ಮೆಹಬೂಬ್ ಜಿಲಾನ್
KARNATAKA

ಮಾ.9ರಿಂದ 24ರವರೆಗೆ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ಚಾತ್ರೆ: AC ಮೆಹಬೂಬ್ ಜಿಲಾನ್

By kannadanewsnow0906/03/2025 6:29 PM

ಚಿತ್ರದುರ್ಗ : ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಕ್ಷೇತ್ರದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳು, ಯೋಜನೆಗಳು, ಸೌಲಭ್ಯಗಳು ಹಾಗೂ ಆಯಾ ಇಲಾಖೆಗೆ ಸಂಬಂಧಿಸಿದ ಇನ್ನಿತರೆ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ವಸ್ತುಪ್ರದರ್ಶವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ವಸ್ತುಪ್ರದರ್ಶನ ಏರ್ಪಡಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಕ್ಷೇತ್ರದಲ್ಲಿ ಇದೇ ಮಾರ್ಚ್ 09 ರಿಂದ 24 ರವರೆಗೆ ಜಾತ್ರೆ ನಡೆಯಲಿದ್ದು, ಮಾರ್ಚ್ 16ರಂದು ದೊಡ್ಡ ರಥೋತ್ಸವ ನಡೆಯಲಿದೆ. ಜಾತ್ರೆಗೆ 3 ರಿಂದ 4 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಜಾತ್ರಾ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಸಹಕಾರದೊಂದಿಗೆ ಕನಿಷ್ಟ 10 ರಿಂದ 12 ಮಳಿಗೆಗಳಲ್ಲಿ ಕೃಷಿ, ಅರಣ್ಯ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಮುಂತಾದ ವಿವಿಧ ಇಲಾಖೆಗಳು ಪ್ರತಿ ವರ್ಷದಂತೆ ಈ ಬಾರಿಯೂ ಸಹ ವಸ್ತು ಪ್ರದರ್ಶವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸ್ವ-ಸಹಾಯಕ ಸಂಘಗಳು ಹೆಚ್ಚಾಗಿರುವುದರಿಂದ ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಆಹಾರ ಮಳಿಗೆ ಸ್ಥಾಪನೆಗೆ ಅವಕಾಶ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಾರ್ಯಕ್ರಮಗಳು, ಸೌಲಭ್ಯಗಳ ಮಾಹಿತಿ ಸೇರಿದಂತೆ ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಪಶು ಸಂಗೋಪನಾ ಇಲಾಖೆಯುವರು ಹಕ್ಕಿ ಜ್ವರದ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ಜತೆಗೆ ಪಶು ಸಂಗೋಪನೆ ಇಲಾಖೆಯ ಕಾರ್ಯಕ್ರಮಗಳು, ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. ವಿಶೇಷವಾಗಿ ಕುರಿ ಸಾಕಾಣಿಕೆ ಕುರಿತು ಹಾಗೂ ಕುರಿಗಳ ತಳಿಗಳು ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಆರೋಗ್ಯ ಇಲಾಖೆ ವತಿಯಿಂದ ಎಬಿಆರ್‍ಕೆ ನೋಂದಣಿ ಕುರಿತು ವಸ್ತು ಪ್ರದರ್ಶನದಲ್ಲಿ ಮಾಹಿತಿ ನೀಡಬೇಕು. ತೋಟಗಾರಿಕೆ ಇಲಾಖೆ ವತಿಯಿಂದ ಫಲ-ಪುಷ್ಪ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು. ಎಂದು ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ನರಸಿಂಹಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸ್ವ ಉದ್ಯೋಗಾಕಾಂಕ್ಷಿ ಮಹಿಳೆಯರ ಗಮನಕ್ಕೆ: ಉಚಿತ ಫ್ಯಾಶನ್ ಡಿಸೈನಿಂಗ್, ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಬಜೆಟ್ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ 7 ಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ: ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

ದ್ವಿಭಾಷಾ ನೀತಿಯತ್ತ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರ : `SSLC’ ಪರೀಕ್ಷೆಯಲ್ಲಿ ಹಿಂದಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’!

28/03/2026 6:40 AM2 Mins Read

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM2 Mins Read

ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ `ಸಬ್ ರಿಜಿಸ್ಟ್ರಾರ್ ಕಚೇರಿಗಳು’ ಓಪನ್ : ಸರ್ಕಾರದಿಂದ ಮಹತ್ವದ ಆದೇಶ

28/03/2026 6:24 AM1 Min Read
Recent News

ದ್ವಿಭಾಷಾ ನೀತಿಯತ್ತ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರ : `SSLC’ ಪರೀಕ್ಷೆಯಲ್ಲಿ ಹಿಂದಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’!

28/03/2026 6:40 AM

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM

ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ `IPL’ ಟೂರ್ನಿ ಆರಂಭ : RCB vs SRH ನಡುವೆ ಹೈವೋಲ್ಟೇಜ್ ಉದ್ಘಾಟನಾ ಪಂದ್ಯ!

28/03/2026 6:32 AM

ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ `ಸಬ್ ರಿಜಿಸ್ಟ್ರಾರ್ ಕಚೇರಿಗಳು’ ಓಪನ್ : ಸರ್ಕಾರದಿಂದ ಮಹತ್ವದ ಆದೇಶ

28/03/2026 6:24 AM
State News
KARNATAKA

ದ್ವಿಭಾಷಾ ನೀತಿಯತ್ತ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರ : `SSLC’ ಪರೀಕ್ಷೆಯಲ್ಲಿ ಹಿಂದಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’!

By kannadanewsnow5728/03/2026 6:40 AM KARNATAKA 2 Mins Read

ಬೆಂಗಳೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ರಾಜ್ಯ ಸರ್ಕಾರವು ದ್ವಿಭಾಷಾ ನೀತಿಯತ್ತ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಎಸ್ಎಸ್ಎಲ್ಸಿ (SSLC)…

ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

28/03/2026 6:36 AM

ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ `ಸಬ್ ರಿಜಿಸ್ಟ್ರಾರ್ ಕಚೇರಿಗಳು’ ಓಪನ್ : ಸರ್ಕಾರದಿಂದ ಮಹತ್ವದ ಆದೇಶ

28/03/2026 6:24 AM

ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

28/03/2026 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.