Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾ.16ರಂದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ: ಕ್ಷಣ ಗಣನೆ ಆರಂಭ
KARNATAKA

ಮಾ.16ರಂದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ: ಕ್ಷಣ ಗಣನೆ ಆರಂಭ

By kannadanewsnow0914/03/2025 8:07 PM

ಚಿತ್ರದುರ್ಗ :  ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ ನಡೆಯಲಿದ್ದು, ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹಟ್ಟಿ ತಿಪ್ಪೇಶನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ.

ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಜಾತ್ರೆಗೆ ನಾಡಿನ ಹಲವು ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತಾಧಿಕಾರಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗಿದೆ. ಜಾತ್ರೆ ಪ್ರಯುಕ್ತ ನಾಯಕನಹಟ್ಟಿ ಪಟ್ಟಣ ನೂತನ ವಧುವಿನಂತೆ ಸಿಂಗಾರಗೊಂಡಿದೆ.

ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ ಮತ್ತು ಹೊರಮಠದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಎರಡೂ ದೇವಾಲಯದ ಆವರಣ ಸ್ವಚ್ಛಗೊಳಿಸಲಾಗಿದೆ. ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡೂ ದೇವಾಲಯಗಳ ಆವರಣದಲ್ಲಿ ಬೃಹತ್ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಹೊರಮಠ ದೇವಾಲಯದ ಆವರಣದ ಸುತ್ತಲೂ ಶಾಶ್ವತವಾಗಿ ನೆರಳಿನ ವ್ಯವಸ್ಥೆಗಾಗಿ ಶೆಡ್ ನಿರ್ಮಾಣ ಮಾಡಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಬಿಸಿಲು ಹೆಚ್ಚಿರುವ ಕಾರಣ ಭಕ್ತಾಧಿಗಳಿಗೆ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಕಂದಾಯ ಇಲಾಖೆಯಿಂದ ಸುಮಾರು 50 ಟ್ಯಾಂಕರ್‍ಗಳ ಮೂಲಕ ಹಾಗೂ 20 ಸಾವಿರ ಲೀಟರ್ ಸಾಮಥ್ರ್ಯದ 6 ಹಾಲಿನ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರಿಗೆ ವಿಶೇಷವಾದ ವ್ಯವಸ್ಥೆ ರೂಪಿಸಲಾಗಿದೆ.

ಮುಕ್ತಿಭಾವುಟ- ವರ್ಷದೊಳಗೆ ಹರಾಜಿನ ಮೊತ್ತ ಸಲ್ಲಿಸಲು ಅಡ್ವಾನ್ಸ್ ಚೆಕ್:

ದೇವಾಲಯದ ರೂಢಿ ಮತ್ತು ಸಂಪ್ರದಾಯ ಧಾರ್ಮಿಕ ಪದ್ಧತಿಯಂತೆ ಮುಕ್ತಿಬಾವುಟವನ್ನು ಹರಾಜು ಮಾಡುತ್ತಾ ಬಂದಿದ್ದು, ಹಿಂದೂ ಧಾರ್ಮಿಕ ದತ್ತಿ ಇಲಾಖಾ ಕಾಯ್ದೆಯ ಸೆಕ್ಷನ್-58ರಂತೆ ರೂಢಿ ಸಂಪ್ರದಾಯಗಳನ್ನು ಎಲ್ಲ ಅಧಿಕಾರಿಗಳು ಪಾಲಿಸಬೇಕಾಗಿದೆ, ಅದರಂತೆ ಮುಕ್ತಿಬಾವುಟ ಹರಾಜು ನಡೆಸಲು ತೀರ್ಮಾನಿಸಲಾಗಿದೆ.

ಮುಕ್ತಿಬಾವುಟ ಹರಾಜು ನಡೆಸುವ ಮುಂಚೆ ನೂರು ರೂಪಾಯಿ ಮುಖ ಬೆಲೆಯ ಛಾಪ ಕಾಗದ ತಯಾರಿಸಿಕೊಂಡು ಆಖೈರು ಹರಾಜುದಾರರನ್ನು 1ನೇ ಪಾರ್ಟಿಯಾಗಿ ಸಹಿ ಪಡೆಯಲು ಹಾಗೂ ವರ್ಷದೊಳಗೆ ಹರಾಜಿನ ಮೊತ್ತವನ್ನು ಸಲ್ಲಿಸಲು ಒಂದು ಅಡ್ವಾನ್ಸ್ ದಿನಾಂಕದ ಚೆಕ್‍ನ್ನು ಪಡೆದುಕೊಳ್ಳಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಅದರಂತೆಯೇ ಮುಕ್ತಿ ಬಾವುಟ ಹರಾಜು ಪ್ರಕ್ರಿಯೆ ನಡೆಸಲಾಗುವುದು, ಈ ನಿಟ್ಟಿನಲ್ಲಿ ಹರಾಜು ಕೂಗುವವರು ಸಹಕರಿಸಬೇಕು. ಮುಕ್ತಿಬಾವುಟ ಹರಾಜಿನ ಬಾಬ್ತು ಬಾಕಿ ಇರಿಸಿಕೊಂಡಿರುವವರೆಗಿ ಹರಾಜಿನಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮೂಲ ಸೌಕರ್ಯದ ವ್ಯವಸ್ಥೆ:

ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅಗತ್ಯ ಸಿದ್ಧತೆ ಕಾರ್ಯ ಕೈಗೊಳ್ಳಲಾಗಿದೆ.

ನಾಯಕನಹಟ್ಟಿ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಡಾಂಬರೀಕಣ, ಪಾದಗಟ್ಟೆ ರಸ್ತೆ ಅಗಲೀಕರಣ, ಚರಂಡಿ ಸ್ವಚ್ಛಗೊಳಿಸಲಾಗಿದೆ. ಅನಾವಶ್ಯಕ ಮುಳ್ಳುಗಳ ಗಿಡ ತೆರವುಗೊಳಿಸಲಾಗಿದೆ. ಪಟ್ಟಣದ ಎಲ್ಲ ವಾರ್ಡ್‍ಗಳಿಗೆ ನಿರಂತರವಾಗಿ ನೀರು ಸರಬರಾಜು, ಬೆಸ್ಕಾಂ ವತಿಯಿಂದ ನಿರಂತರ ವಿದ್ಯುತ್ ಪೂರೈಕೆ ಮಾಡುವ ಮೂಲಕ ಬೀದಿದೀಪ, ಹೈಮಾಸ್ಟ್ ದೀಪಗಳ ವ್ಯವಸ್ಥೆ ಮಾಡಲಾಗಿದೆ. ತೇರುಬೀದಿ ಹಾಗೂ ಪಾದಗಟ್ಟೆ ರಸ್ತೆಯ ಶಿಥಿಲ ವಿದ್ಯುತ್ ಕಂಬಗಳನ್ನು ತೆರವು ಗೊಳಿಸಿ, ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ. ಜಾತ್ರೆಗೆ ಬರುವ ಭಕ್ತರಿಗೆ ಪಟ್ಟಣದ ಹಲವು ಕಡೆಗಳಲ್ಲಿ ಶೌಚಾಲಯ ವ್ಯವಸ್ಥೆ, ಬಳಸಲು ನೀರಿನ ತೊಟ್ಟಿಗಳು, ಕೊಳವೆ ಬಾವಿಗಳಿಂದ ನಿರಂತರವಾಗಿ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ವ್ಯವಸ್ಥೆ, ಚರಂಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಫಿನಾಯಿಲ್, ಸೊಳ್ಳೆಗಳ ನಿಯಂತ್ರಣಕ್ಕೆ ಧೂಮೀಕರಣ ವ್ಯವಸ್ಥೆ ಹಮ್ಮಿಕೊಳ್ಳಲಾಗಿದೆ. ಜಾತ್ರೆಗೆ ಬರುವ ಭಕ್ತರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಬ್ಯಾನರ್‍ಗಳ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯಿಂದ ಕೈಗೊಳ್ಳಲಾಗಿದೆ.

ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಅನುಕೂಲವಾಗುವಂತೆ 4 ಕಡೆ ತಾತ್ಕಾಲಿಕ ಕ್ಲಿನಿಕ್, 4 ಮೊಬೈಲ್ ಆಂಬುಲೆನ್ಸ್, ನೀರಿನ ಶುದ್ಧತೆ ಹಾಗೂ ಆಹಾರ ತಪಾಸಣೆ ಬಗ್ಗೆ ಪರೀಕ್ಷೆ ಇತರೆ ಕೆಲಸ ಕಾರ್ಯಗಳಿಗೆ ಒಟ್ಟು 150 ಜನ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಾತ್ರೆ ಸಮಯದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ಸಲುವಾಗಿ ಚಳ್ಳಕೆರೆ ನಗರಸಭೆ ಮತ್ತು ಮೊಳಕಾಲ್ಮುರು ಪಟ್ಟಣ ಪಂಚಾಯಿತಿಯಿಂದ ಪೌರಕಾರ್ಮಿಕರನ್ನು ನಿಯೋಜಿಸಲಾಗಿದ್ದು, ಸ್ವಚ್ಚತಾ ಕೆಲಸಕ್ಕೆ ಹೆಚ್ಚು ಆದ್ಯತೆ ನೀಡಲು ಕ್ರಮ ವಹಿಸಲಾಗಿದೆ.

ಸುಗಮ ಸಂಚಾರಕ್ಕೆ ವ್ಯವಸ್ಥೆ:

ಜಾತ್ರೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಪಟ್ಟಣದ ಹಲವು ಕಡೆಗಳಲ್ಲಿ ಬಸ್‍ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ದಾವಣಗೆರೆ-ಜಗಳೂರು- ಹೊಸಪೇಟೆ ಕಡೆಯಿಂದ ಬರುವ ವಾಹನಗಳಿಗೆ ಪಟ್ಟಣದ ಗಂಗಯ್ಯನಹಟ್ಟಿ ಬಳಿ. ಬಳ್ಳಾರಿ-ಅನಂತಪುರ- ರಾಯದುರ್ಗ- ಕಲ್ಯಾಣದುರ್ಗ ಕಡೆಯಿಂದ ಬರುವ ವಾಹನಗಳಿಗೆ ತಳಕು ರಸ್ತೆಯ ಮದರಸಾದ ಬಳಿ. ಬೆಂಗಳೂರು- ತುಮಕೂರು- ಚಳ್ಳಕೆರೆ- ಚಿತ್ರದುರ್ಗ ಮಾರ್ಗದಿಂದ ಬರುವವರಿಗೆ ಮನಮೈನಹಟ್ಟಿ ಏಕಾಂತೇಶ್ವರ ದೇವಾಲಯದ ಬಳಿ ಬಸ್‍ನಿಲ್ದಾಣಗಳನ್ನು ತೆರೆಯಲಾಗಿದೆ.

200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ :

ಶ್ರೀ ಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 15 ರಿಂದ 17 ರವರೆಗೆ ಜರುಗಲಿರುವ ಶ್ರೀಗುರುತಿಪ್ಪೇರುದ್ರಸ್ವಾಮಿ ರಥೋತ್ಸವ ಅಂಗವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಪಾವಗಡ ಘಟಕಗಳಿಂದ ಒಟ್ಟು 200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ವಿಶೇಷ ವಾಹನಗಳ ಕಾರ್ಯಾಚರಣೆ ಮಾರ್ಗ ಇಂತಿದೆ. ಚಿತ್ರದುರ್ಗ-ನಾಯಕನಟ್ಟಿ ವಯಾ ಬೆಳಗಟ್ಟ, ಹಾಯ್ಕಲ್, ಚಳ್ಳಕೆರೆ. ಚಳ್ಳಕೆರೆ-ನಾಯಕನಹಟ್ಟಿ ವಯಾ ನೇರ್ಲಗುಂಟೆ. ಹಿರಿಯೂರು-ನಾಯಕನಹಟ್ಟಿ ವಯಾ ಸಾಣಿಕೆರೆ-ಚಳ್ಳಕೆರೆ-ನೇರ್ಲಗುಂಟೆ. ನಾಯಕನಹಟ್ಟಿ-ಪರಶುರಾಂಪು ವಯಾ ಚಳ್ಳಕೆರೆ ಮಾರ್ಗದಲ್ಲಿ ಸಂಚರಿಸಲಿವೆ.

ಪ್ರಯಾಣಿಕರ ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನ ಕಾರ್ಯಾಚರಣೆ ಮಾಡಲಾಗುವುದು. ಭಕ್ತಾಧಿಗಳು ವಿಶೇಷ ವಾಹನಗಳ ಸದುಪಯೋಗವನ್ನು ಉತ್ತಮ ರೀತಿಯಿಂದ ಪಡೆದುಕೊಳ್ಳಬೇಕು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಪ್ರಾಣಿ ಬಲಿ ನಿಷೇಧ:

ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ ಅನ್ವಯ ದೇವಸ್ಥಾನ ಹಾಗೂ ದೇವಸ್ಥಾನದ ಅವರಣದಲ್ಲಿ ದೇವರ ಹೆಸರಿನಲ್ಲಿ ಪ್ರಾಣಿ ಬಲಿ ನೀಡುವುದು ಕಾನೂನಿಗೆ ವಿರುದ್ದವಾಗಿರುತ್ತದೆ. ಮಾರ್ಚ್ 16 ರಂದು ನಾಯಕನಹಟ್ಟಿಯ ಶ್ರೀಗುರು ತಿಪ್ಪೆರುದ್ರಸ್ವಾಮಿ ದೊಡ್ಡ ರಥೋತ್ಸವ ಜರುಗಲಿದ್ದು, ಇದಕ್ಕೆ ಪೂರಕವಾಗಿ ಮಾರ್ಚ್ 09 ರಿಂದ 17 ರವರೆಗೆ ಜಾತ್ರ ನಡೆಯಲಿದೆ. ಈ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಅವರಣ ಹಾಗೂ ಸುತ್ತಮುತ್ತಲಿನ ಪ್ರದೇಶದೊಳಗೆ ಭಕ್ತಾಧಿಗಳು, ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ ಬಲಿ ನೀಡುವುದನ್ನು ಮತ್ತು ಇತರೆ ಪ್ರಾಣಿಗಳನ್ನು ತೆಗೆದುಕೊಂಡು ಬರುವುದು ಹಾಗೂ ಮಾರಕಾಸ್ತ್ರಗಳನ್ನು ತರುವುದು, ಇತರೆ ಅನಾಗರೀಕ ಪದ್ಧತಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧವಾಗಿ ಪ್ರಾಣಿ ಬಲಿ ನಿಷೇಧ ಪ್ರಚಾರಕ್ಕಾಗಿ ಅಗತ್ಯವಾಗಿ ಬೇಕಾದ ಕರಪತ್ರ, ಬ್ಯಾನರ್‍ಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೇ ಅಗತ್ಯವಿರುವ 8 ಕಡೆ ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಲಾಗಿದೆ.

ಮದ್ಯಪಾನ ನಿಷೇಧ:

ಜಾತ್ರೆಯ ಆವರಣದಿಂದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾರ್ಚ್ 16 ರಿಂದ 17 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ನಿಷೇಧದ ಪೂರ್ವದಲ್ಲಿ ಗ್ರಾಮದೊಳಗೆ ಮದ್ಯ ತರದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಅಬಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ರಥಕ್ಕೆ ರೂ.2.50 ಕೋಟಿ ವಿಮೆ:

ನಾಯಕನಹಟ್ಟಿ ಜಾತ್ರೆಯ ಕೇಂದ್ರ ಬಿಂದು ದೊಡ್ಡ ರಥವಾಗಿದ್ದು, ಪ್ರತಿ ವರ್ಷದಂತೆ ರಥ ಮತ್ತು ಬಾಬುದಾರರು ಹಾಗೂ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಅಪಘಾತ ವಿಮೆಯನ್ನು ಮಾಡಿಸಲಾಗಿದ್ದು, ಗುರು ತಿಪ್ಪೇರುದ್ರಸ್ವಾಮಿ ರಥಕ್ಕೆ ರೂ.2.50 ಕೋಟಿ ಮೊತ್ತದ ವಿಮಾ ಸೌಲಭ್ಯಗಳನ್ನು ಒದಗಿಸಲಾಗಿದೆ.

ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಮಾರ್ಗದರ್ಶನ ಪಡೆದು ದೊಡ್ಡರಥಕ್ಕೆ ಮತ್ತು ಚಿಕ್ಕರಥಕ್ಕೆ ದುರಸ್ಥಿ ಮಾಡಿಸಿ, ಸರ್ವೀಸಿಂಗ್ ಮಾಡಿ, ರಥೋತ್ಸವಕ್ಕೆ ಸಿದ್ಧಪಡಿಸಲಾಗಿದೆ. ಮಧ್ಯ ಕರ್ನಾಟಕದ ಭಾಗದ ಅತೀ ಎತ್ತರದ ಸುಮಾರು 200 ಟನ್ ತೂಕವಿರುವ ಈ ರಥವು 5 ಚಕ್ರಗಳನ್ನು ಹೊಂದಿದೆ. ರಥಕ್ಕೆ ಕಳೆದ ಎರಡು ದಿನಗಳಿಂದ ಬಣ್ಣಬಣ್ಣದ ಬಾವುಟಗಳನ್ನು ಅಳವಡಿಸುವ ಕಾರ್ಯ ಕೈಗೊಳ್ಳಲಾಗಿದ್ದು, ರಥವನ್ನು ಎಳೆಯುವ 2 ಅಡಿ ಸುತ್ತಳತೆ ಇರುವ ನೂತನ ಮಿಣಿ (ಹಗ್ಗ)ಯನ್ನು ಪರೀಕ್ಷಿಸಲಾಗಿದೆ. ಆ ಮೂಲಕ ಜಾತ್ರೆಗೆ ರಥವನ್ನು ಎಲ್ಲಾ ಹಂತದಲ್ಲೂ ಸಿದ್ಧಗೊಳಿಸಲಾಗಿದೆ.

ನಾಯಕನಹಟ್ಟಿ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಯಾವುದೇ ತರಹದ ಕುಂದುಕೊರತೆ ಉಂಟಾಗದಂತೆ ಅಗತ್ಯವಾದ ಎಲ್ಲಾ ಸಿದ್ಧತೆಯನ್ನು ಜಿಲ್ಲಾಡಳಿತ ಕೈಗೊಂಡಿದೆ.

ಹಾಸನದ ಬೇಲೂರಲ್ಲಿ ಆನೆ ದಾಳಿಗೆ ಮಹಿಳೆ ಸಾವು: ಸಚಿವ ಈಶ್ವರ್ ಖಂಡ್ರೆ ಸಂತಾಪ

BIG UPDATE: ಅಪಘಾತದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ: ದಾವಣಗೆರೆ SS ಆಸ್ಪತ್ರೆಗೆ ದಾಖಲು

Share. Facebook Twitter LinkedIn WhatsApp Email

Related Posts

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read
Recent News

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM

BREAKING : ‘ಆಪರೇಷನ್ ಸಿಂಧೂರ್’ ನಲ್ಲಿ ಉಗ್ರರ ನೆಲೆಗಳನ್ನು ನಾಶ ಮಾಡಿರೋ ಸಾಕ್ಷಿಗಳಿವೆ : ಫೋಟೋ ರಿಲೀಸ್ ಮಾಡಿದ ಸೇನೆ

11/05/2025 6:55 PM
State News
KARNATAKA

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

By kannadanewsnow0511/05/2025 6:02 PM KARNATAKA 1 Min Read

ಬೆಂಗಳೂರು : ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಿದೆ. ಇದೀಗ ಮಹಿಳಾ ಸಹೋದ್ಯೋಗಿಗಳ ಭಾವಚಿತ್ರಗಳನ್ನು…

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.