ಮಾ.16ರಂದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ: ಕ್ಷಣ ಗಣನೆ ಆರಂಭ

ಚಿತ್ರದುರ್ಗ :  ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ ನಡೆಯಲಿದ್ದು, ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹಟ್ಟಿ ತಿಪ್ಪೇಶನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಜಾತ್ರೆಗೆ ನಾಡಿನ ಹಲವು ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತಾಧಿಕಾರಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗಿದೆ. ಜಾತ್ರೆ ಪ್ರಯುಕ್ತ ನಾಯಕನಹಟ್ಟಿ ಪಟ್ಟಣ ನೂತನ ವಧುವಿನಂತೆ ಸಿಂಗಾರಗೊಂಡಿದೆ. ತಿಪ್ಪೇರುದ್ರಸ್ವಾಮಿ … Continue reading ಮಾ.16ರಂದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ: ಕ್ಷಣ ಗಣನೆ ಆರಂಭ