ಶಿವಮೊಗ್ಗ: ಮಹಿಳೆಗೆ ಕೆಲಸ ಕೊಡಿಸುವುದಾಗಿ 3 ಲಕ್ಷ ಪಡೆದು, ವಂಚಿಸಿದಂತ ಆರೋಪದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಾಜಿಮಾ ಹಾಗೂ ವೈ ತಿಮ್ಮರಾಜು ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಗುತ್ತಿಗೆ ಆಧಾರದಲ್ಲಿ ಅಸ್ಮಾ ಬಾನು ಎಂಬುವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದಂತ ನಾಜಿಮಾ ಹಾಗೂ ವೈ.ತಿಮ್ಮರಾಜು ಅವರು ಕೆಲಸ ಕೊಡಿಸುವುದಾಗಿ 3 ಲಕ್ಷ ಹಣ ಪಡೆದಿದ್ದರು. ಈ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೆಸರನ್ನು, ಪರಿಷತ್ ಸದಸ್ಯರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾಗಿ ಆರೋಪಿಸಿ ಅಸ್ಮಾ ಬಾನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ದೂರು ಆಧರಿಸಿ ನಾಜಿಯಾ, ವೈ.ತಿಮ್ಮರಾಜು ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಮುಜುಗರ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಅವರು ನಾಜಿಮಾ ಅವರನ್ನು ಪಕ್ಷದಿಂದ ಉಚ್ಚಾಟಿಸಿವಂತೆ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ನಾಜಿಮಾ ಹಾಗೂ ವೈ.ತಿಮ್ಮರಾಜು ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಆದೇಶಿಸಿದ್ದಾರೆ.
ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್
ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ








