ಯಾದಗಿರಿ : ಮುಂದಿನ ಎರಡು ವರ್ಷಗಳಲ್ಲಿ ಕೇಂದ್ರದಲ್ಲಿ NDA ಸರ್ಕಾರ ಪತನಗೊಳ್ಳಲಿದ್ದು, ನಂತರ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರಧಾನಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಭವಿಷ್ಯ ನುಡಿದಿದ್ದಾರೆ.
ಹೌದು ಅವರು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಇನ್ನೆರಡು ವರ್ಷದ ನಂತರ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಇರುವುದಿಲ್ಲ. ಖರ್ಗೆ ಪ್ರಧಾನಿ ಆದರೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಗಲಿದೆ. ವಿಶೇಷವಾಗಿ ಕಲಬುರ್ಗಿ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಯಾಗಲಿದೆ. ಸಮಸ್ತ ಕುಲಬಾಂಧವರಿಗೆ ಒಳ್ಳೆಯ ಕಾಲ ಬರಲಿದೆ ಎಂದು ಗುರುಮಠಕಲ್ ನಲ್ಲಿ ಮಾಜಿ ಸಚಿವ ಬಾಬುರಾವ ಚಿಂಚನಸೂರ್ ಅವರು ಹೇಳಿಕೆ ನೀಡಿದರು.