ಮಂಡ್ಯ : ಇಂದು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಹಾಗಾಗಿ ಇವರ ಜೊತೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವನ್ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜೊತೆಗಿರಲಿದ್ದಾರೆ ಈ ವೇಳೆ ಪ್ರಮೋದ್ ಸಾವಂತ್ ಮಾತನಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮಂಡ್ಯದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆ ನೀಡಿದರು. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲೂ ಎನ್ ಡಿ ಎ ಗೆಲ್ಲುತ್ತದೆ. ಏನ್ ಡಿ ಎ ಸರಕಾರ ಬಡವರ ಪರ ಸಾಕಷ್ಟು ಅಭಿವೃದ್ಧಿ ಮಾಡಿದೆ. ಕಾಂಗ್ರೆಸ್ ಜಾತಿ ಆಧಾರದ ಮೇಲೆ ರಾಜಕಾರಣ ಮಾಡುತ್ತಿದೆ ಬಿಜೆಪಿ ಅಭಿವೃದ್ಧಿ ಮೇಲೆ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಇದು ಮೋದಿ ಅವರ ಸಾಧನೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ.ಡಬಲ್ ಇಂಜಿನ್ ಸರ್ಕಾರದಿಂದ ಈಗಾಗಲೇ ಗೋವಾದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಕರ್ನಾಟಕದಲ್ಲೂ ಕೂಡ ಡಬಲ್ ಇಂಜಿನ್ ಸರ್ಕಾರ ಬರುತ್ತದೆ ಎಂದು ಮಂಡ್ಯದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.