ಬೆಂಗಳೂರು : ರಾಜ್ಯದಲ್ಲಿ ಅತಿ ಶೀಘ್ರದಲ್ಲಿ ಪಡಿತರ ವಿತರಣೆಯಲ್ಲಿ ಸಮಗ್ರ ಬದಲಾವಣೆ ತರಲು ಕ್ರಮವಹಿಸಲಾಗುವುದು ಎಂದು ಅಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.
ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯ ಉದಯ ಕೆ.ಎಂ.ಅವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಪಡಿತರವನ್ನು ವಿತರಣೆ ಮಾಡಲು ಅನುಕೂಲವಾಗುವಂತೆ ಹೆಚ್ಚುವರಿ ಸರ್ಕಾರಿ ನ್ಯಾಯಬೆಲೆ ಅಂಗಡಿಗಳನ್ನು ಸ್ಥಾಪಿಸುವ ಬಗ್ಗೆ ಪ್ರಸ್ತಾಪಿಸಿದ ವೇಳೆಯಲ್ಲಿ ಈ ವಿಷಯ ಕುರಿತು ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶದವರಿಗೆ ಪಡಿತರ ವಿತರಣೆಯಲ್ಲಿ ತೊಂದರೆಯಾಗುತ್ತಿರುವುದು ತಿಳಿದು ಬಂದಿದ್ದು, ಈ ಬಗ್ಗೆ ಅತಿ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಂಡು, ಎಲ್ಲರಿಗೂ ಹತ್ತಿರದಲ್ಲಿ ಪಡಿತರ ಸಿಗುವಂತೆ ಅವಕಾಶ ಕಲ್ಪಿಸಲಾಗುವುದು ಎಂದರು.