ನವದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವಿನ ನಗೆ ಬೀರಿದ್ದು, 15 ವರ್ಷಗಳ ಬಿಜೆಪಿ ಆಡಳಿತವನ್ನು ಕೊನೆಗೊಳಿಸಿದೆ. ಇನ್ನು ಭರ್ಜರಿ ಗೆಲುವಿನ ಸಂಭ್ರಮದಲ್ಲಿರುವ ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ಪ್ರತಿಕ್ರಿಯಿಸಿದ್ದು, ಪಾಲಿಕೆಯಲ್ಲಿ ಉತ್ತಮ ಆಡಳಿತ ನಡೆಸಲು ಕೇಂದ್ರ ಮತ್ತು ಪ್ರಧಾನಿ ಮೋದಿರುವರ ಆಶೀರ್ವಾದ ಕೋರಿದ್ದಾರೆ.
ದೆಹಲಿಯಲ್ಲಿ ಕೆಲಸ ಮಾಡಲು ಬಿಜೆಪಿ ಮತ್ತು ಕಾಂಗ್ರೆಸ್ ಸಹಕಾರವನ್ನು ನಾನು ಬಯಸುತ್ತೇನೆ. ನಾನು ಕೇಂದ್ರಕ್ಕೆ ಮನವಿ ಮಾಡುತ್ತೇನೆ. ದೆಹಲಿಯನ್ನು ಉತ್ತಮಗೊಳಿಸಲು ಪ್ರಧಾನಿಯವರ ಆಶೀರ್ವಾದವನ್ನು ಕೇಳುತ್ತೇನೆ. ಎಂಸಿಡಿಯನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು. ಇಂದು ದೆಹಲಿಯ ಜನರು ಇಡೀ ದೇಶಕ್ಕೆ ಸಂದೇಶ ನೀಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯ 250 ಸ್ಥಾನಗಳ ಮಹಾನಗರ ಪಾಲಿಕೆ (ಮುನ್ಸಿಪಲ್ ಕಾರ್ಪೊರೇಶನ್ನಲ್ಲಿ) ಚುನಾವಣೆಯಲ್ಲಿ ಎಎಪಿ 134 ವಾರ್ಡ್ಗಳನ್ನು ಗೆದ್ದುಕೊಂಡರೆ, ಬಿಜೆಪಿ ಕೇವಲ 104 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಕೇವಲ 9 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ.
ಈ ಗೆಲುವಿಗಾಗಿ ನಾನು ದೆಹಲಿಯ ಜನರನ್ನು ಅಭಿನಂದಿಸುತ್ತೇನೆ. ಬದಲಾವಣೆಯನ್ನು ತಂದಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ದೆಹಲಿಯನ್ನು ಸ್ವಚ್ಛಗೊಳಿಸಬೇಕಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಕೊಡುಗೆ ನೀಡಬೇಕು. ನಾವು ದೆಹಲಿಯನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
BIGG BREAKING NEWS : ‘KGF’ ಸಿನಿಮಾ ಖ್ಯಾತಿಯ ತಾತ ಕೃಷ್ಣ ಜಿ .ರಾವ್ ಇನ್ನಿಲ್ಲ | Krishna G Rao no more