ರಾಜಸ್ಥಾನ : ಹಾಸ್ಟೆಲ್ಗಳಲ್ಲಿ ಕಲುಷಿತ ನೀರು ಸೇವಿಸಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, 65 ಕ್ಕೂ ಹೆಚ್ಚು ಕೋಚಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ರಾಜಸ್ಥಾನದ ಕೋಟಾದ ಜವಾಹರ್ ನಗರ ಪ್ರದೇಶದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ವೈಭವ್ ರಾಯ್(18) ಎಂದು ಗುರುತಿಸಲಾಗಿದ್ದು, ಈತ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಆಕಾಂಕ್ಷಿಯಾಗಿದ್ದನು. ಈತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.
ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ಹೆಪಟೈಟಿಸ್–ಎಗೆ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ. ಆಡಳಿತ ಮತ್ತು ಆರೋಗ್ಯ ಇಲಾಖೆ ವಿದ್ಯಾರ್ಥಿಗಳಿಗೆ ವೈದ್ಯಕೀಯ ನೆರವು ನೀಡುತ್ತಿದೆ.
ಕೋಟಾದ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಂಎಚ್ಒ) ಜಗದೀಶ್ ಸೋನಿ ಮಾತನಾಡಿ, ಹಾಸ್ಟೆಲ್ಗಳಲ್ಲಿ ಆಹಾರ ಮತ್ತು ನೀರಿನ ಗುಣಮಟ್ಟವನ್ನು ಪರಿಶೀಲಿಸಲಾಗುತ್ತಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದೇಳಿದರು.
ಕೋಟಾ (ನಗರ) ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಬ್ರಿಜ್ ಮೋಹನ್ ಬೈರ್ವಾ ಅವರು ಈ ಬಗ್ಗೆ ತನಿಖೆ ನಡೆಸಲು ಸಿಎಂಎಚ್ಒಗೆ ಸೂಚಿಸಲಾಗಿದೆ ಮತ್ತು ಅವರಿಂದ ವರದಿಗಾಗಿ ಕಾಯಲಾಗುತ್ತಿದೆ ಎಂದು ಹೇಳಿದರು.