ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ವ್ಯವಸ್ಥೆ ರದ್ದು ಮಾಡುವ ವಿಚಾರದ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ನೀಟ್ ಪರೀಕ್ಷೆಯನ್ನು ರದ್ದು ಮಾಡಲು ಸಾಧ್ಯವಿಲ್ಲ. ನೀಟ್ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ಆದೇಶದಿಂದ ಕೇಂದ್ರ ಸರ್ಕಾರ ನಿರ್ಧಾರ ಮಾಡಬೇಕು ಎಂದು ತಿಳಿಸಿದ್ದಾರೆ.
ನೀಟ್ ಪರೀಕ್ಷೆ ಅಕ್ರಮದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಕೇಂದ್ರ ಸರ್ಕಾರ ನೀಟ್ ಪರೀಕ್ಷೆ ಮಾಡುವುದರಲ್ಲಿ ಎಡವಟ್ಟು ಮಾಡಿಕೊಂಡಿದೆ. ಪ್ರನೆ ಪತ್ರಿಕೆ ಸೋರಿಕೆಯಾಗಿದ್ದು, ತನಿಖೆ ಮಾಡುವಂತೆ ನಾವು ಆಗ್ರಹ ಮಾಡಿದ್ದೆವು. ಆಗ ಕೇಂದ್ರ ಸರ್ಕಾರ ಒಪ್ಪಲಿಲ್ಲ. ಬಳಿಕ ಸಿಬಿಐ ತನಿಖೆಗೆ ನೀಡಿದೆ ಎಂದರು.