ಕೆಎನ್ಎನ್ಡಿಜಿಟಲ್ ಡೆಸ್ಕ್ : ಕೇರಳದ ಶಿಕ್ಷಣ ಸಂಸ್ಥೆಯೊಂದರಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಗೆ ಹಾಜರಾಗಲು ತಮ್ಮ ಒಳ ಉಡುಪುಗಳನ್ನ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಹೇಳಿದ ಆರೋಪದ ಮೇಲೆ ನೀಟ್ ಪರೀಕ್ಷೆ ಕರ್ತವ್ಯದಲ್ಲಿದ್ದ ಐವರು ಮಹಿಳೆಯರನ್ನ ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಮಹಿಳೆಯರು ಎನ್ಟಿಎ ನೇಮಿಸಿಕೊಂಡ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರೆ, ಇಬ್ಬರು ಘಟನೆ ನಡೆದ ಆಯುರ್ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.