ಕೆಎನ್ಎನ್ಡಿಜಿಟಲ್ ಡೆಸ್ಕ್ : ನೀಟ್(NEET) ಪರೀಕ್ಷೆ ಬರೆಯುವ ಮುನ್ನ ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಒತ್ತಾಯಿಸಲಾಗಿತ್ತು. ಈ ವಿಷಯ ಭಾರೀ ಚರ್ಚೆಗೂ ಒಳಗಾಗಿತ್ತು. ಆದ್ರೆ, ಇದೀಗ ವಿದ್ಯಾರ್ಥಿನಿಯರಿಗೆ ಪುನಃ NEET ಪರೀಕ್ಷೆಯನ್ನು ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹೇಳಿದೆ.
ಸೆಪ್ಟೆಂಬರ್ 4 ರಂದು NEET ಪರೀಕ್ಷೆಯನ್ನು ಅಭ್ಯರ್ಥಿಗಳಿಗೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದೀಗ ಮರು ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಇಮೇಲ್ ಮೂಲಕ ಮಾಹಿತಿ ನೀಡಲಾಗಿದೆ.
ಕೇರಳದ ಕೊಲ್ಲಂ ಜಿಲ್ಲೆಯ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ಯುವತಿಯರಿಗೆ ಒಳಉಡುಪುಗಳನ್ನು ತೆಗೆಯುವಂತೆ ಒತ್ತಾಯಿಸಲಾಗಿತ್ತು. ಈ ಬಗ್ಗೆ ಜುಲೈನಲ್ಲಿ ವಿದ್ಯಾರ್ಥಿನಿಯೊಬ್ಬರ ತಂದೆ ಕೊಟ್ಟಾರಕರ ಪೊಲೀಸರಿಗೆ ದೂರು ಸಲ್ಲಿಸಿದ ನಂತ್ರ ವಿಷಯ ಬೆಳಕಿಗೆ ಬಂದಿತ್ತು. ಈ ವೇಳೆ ಭಾರೀ ಗಲಾಟೆಗೂ ಕಾರಣವಾಗಿತ್ತು.