ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಗುರುವಾರ ಬಿಹಾರದ ಪಾಟ್ನಾದಲ್ಲಿ ಇಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬುಧವಾರ ಜಾರ್ಖಂಡ್ ನ ಹಜಾರಿಬಾಗ್ ನ ಶಾಲೆಯೊಂದಕ್ಕೆ ಭೇಟಿ ನೀಡಿ ಅದರ ಪ್ರಾಂಶುಪಾಲರನ್ನು ಪ್ರಶ್ನಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.