ಹಾವೇರಿ : ಹಾವೇರಿ ನಗರದಲ್ಲಿ ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ.
ಇದರ ನಡುವೆ ಬಿಜೆಪಿ ಎಂಎಲ್ಸಿ (MLC) ಹೆಚ್ ವಿಶ್ವನಾಥ್ ಆರೋಪವೊಂದನ್ನು ಮಾಡಿದ್ದು, ಸಮ್ಮೇಳನದಲ್ಲಿ ಮುಸ್ಲಿಂ ಹಾಗೂ ದಲಿತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಸಾಹಿತ್ಯ ಸಮ್ಮೇಳನದಲ್ಲಿ 85 ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ಆದರೆ ಇದರಲ್ಲಿ ಮುಸ್ಲಿಂ ಮತ್ತು ದಲಿತರನ್ನು ಕಡೆಗಣಿಸಲಾಗಿದೆ. ಇದರಲ್ಲೂ ರಾಜಕೀಯ ನಡೆದಿದೆ ಎಂದು ಕಿಡಿಕಾರಿದರು. ಸಮ್ಮೇಳನಕ್ಕೆ ಸರ್ಕಾರ 20 ಕೋಟಿ ರೂ. ಬಿಡುಗಡೆ ಮಾಡಿದ್ದು, ಹಣ ಕೊಟ್ಟು ಸಭೆ ಮಾಡದೆ ಮೌನವಾಗಿರುವುದು ಸರಿಯಲ್ಲ , ದಿಕ್ಕುದೆಸೆ ಇಲ್ಲದ ಡೋಂಗಿ ಸಾಹಿತ್ಯ ಸಮ್ಮೇಳನವನ್ನು ಧಿಕ್ಕರಿಸುತ್ತೇವೆ ಎಂದರು.
ಸಮ್ಮೇಳನದ ಹಿನ್ನೆಲೆ ಪಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ರಜೆ
ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ, ಹಾವೇರಿ ಜಿಲ್ಲೆಯಾದ್ಯಂತ ಎಲ್ಲಾ ಪಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ.
ಹಾವೇರಿ ಜಿಲ್ಲೆಯಾದ್ಯಂತ ಎಲ್ಲಾ ಪಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ದಿನಾಂಕ: 06-01-2023 ಮತ್ತು 7-01-2023 ರಂದು ರಜೆ ಘೋಷಿಸಲು ಆದೇಶಿಸಲಾಗಿರುತ್ತದೆ. ಸದರಿ ಆದೇಶದನ್ವಯ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 06-01-2023 ಮತ್ತು 07-01-2023 ರಂದು ರಜೆ ಘೋಷಿಸಿ ಆದೇಶಿಸಲಾಗಿದೆ.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲಾ ಪ್ರತಿನಿಧಿಗಳಿಗೆ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ವಸತಿ ಸೌಕರ್ಯಕ್ಕೆ ಆಯ್ಕೆ ಮಾಡಲಾಗಿದ್ದು, ಸದರಿ ಪಟ್ಟಿಯಲ್ಲಿರುವ ಶಾಲೆಗಳಿಗೆ ದಿನಾಂಕ: 04-01-2013 ರಿಂದ 05-01-2023ರ ವರೆಗೆ ಹೆಚ್ಚುವರಿಯಾಗಿ 12 ದಿನ ರಜೆ ಘೋಷಿಸಿದೆ. ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಸೂಚಿಸಿದೆ.
ಬಳ್ಳಾರಿಯಲ್ಲಿ ಯೋಜನಾಬದ್ಧ ಬೆಳವಣಿಗೆಗೆ ಒತ್ತು ನೀಡಲಾಗುತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ
BREAKING NEWS : ಚಿತ್ರದುರ್ಗದಲ್ಲಿ ಮಾಜಿ ಸಚಿವ H. ಆಂಜನೇಯ ಆಪ್ತನ ಮನೆ ಮೇಲೆ ಐಟಿ ದಾಳಿ |IT Raid
BIGG NEWS : ರಾಜ್ಯದಲ್ಲಿ ಇಂದು 34 ಜನರಿಗೆ ಕೊರೊನಾ ಸೋಂಕು ಧೃಡ : ಸಕ್ರಿಯ ಪ್ರಕರಣಗಳ ಸಂಖ್ಯೆ 309