ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಗೆ ಆದೇಶಿಸಿತ್ತು. ಈ ಸಮೀಕ್ಷೆ ನಡೆಸಬೇಕಿದ್ದಂತ ಅಧಿಕಾರಿ, ಸಿಬ್ಬಂದಿಗಳು ಮಾತ್ರ ಅದನ್ನು ಮಾಡದೇ ಕೇವಲ ಸಮೀಕ್ಷೆ ನಡೆಸಿದ್ದಾಗಿ ಸ್ಟಿಕ್ಕರ್ ಅಂಟಿಸಿ ಬಂದಿದ್ದರು. ಈ ಹಿನ್ನಲೆಯಲ್ಲಿ ಇಂದು ಒಂದೇ ದಿನ ನಾಲ್ವರನ್ನು ಅಮಾನತುಗೊಳಿಸಿ ಬಿಬಿಎಂಪಿ ಆದೇಶಿಸಿದೆ.
ಬಿಬಿಎಂಪಿಯ ಪಶ್ಚಿಮ ವಲಯದ ಮತ್ತಿಕೆರೆ ಉಪ ವಿಭಾಗದ, ಕೆಂಗೇರಿ ಉಪ ವಿಭಾಗದ ಇಬ್ಬರು ಸಸ್ಪೆಂಡ್
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಇಬ್ಬರನ್ನು ಅಮಾನತ್ತುಗೊಳಿಸಲಾಗಿದೆ.
ಪಶ್ಚಿಮ ವಲಯದ ಮತ್ತಿಕೆರೆ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ರಾಮಾಂಜನೇಯಲು, ಆರ್. ಆರ್ ನಗರ ವಲಯ ಕೆಂಗೇರಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ಪ್ರವೀಣ್ ಕುಮಾರ್ ಸಿ.ಎನ್ ರವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
ಬಿಬಿಎಂಪಿ ಪಶ್ಚಿಮ ವಲಯದ ಗೋವಿಂದರಾಜನಗರ ಉಪ ವಿಭಾಗದಲ್ಲಿ ಒಬ್ಬರು ಸಸ್ಪೆಂಡ್
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಸಿಬ್ಬಂದಿಯನ್ನು ಅಮಾನತ್ತುಗೊಳಿಸಲಾಗಿದೆ.
ಪಶ್ಚಿಮ ವಲಯದ ಗೋವಿಂದರಾಜನಗರ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಮೌಲ್ಯಮಾಪಕರಾದ ಹನುಮಂತರಾಜು, ರವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
ಬಿಬಿಎಂಪಿ ದಕ್ಷಿಣ ವಲಯದ ಹೊಂಬೇಗೌಡ ನಗರದ ಉಪ ವಿಭಾಗದಲ್ಲಿ ಕಂದಾಯ ಪರಿವೀಕ್ಷಕಿ ಅಮಾನತು
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಸಿಬ್ಬಂದಿಯನ್ನು ಅಮಾನತ್ತುಗೊಳಿಸಲಾಗಿದೆ.
ದಕ್ಷಿಣ ವಲಯದ ಹೊಂಬೇಗೌಡನಗರ ಉಪ ವಿಭಾಗದಲ್ಲಿ ಪ್ರಭಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ಶುಭಾಷಿಣಿ, ರವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ