ಧಾರವಾಡ: ಕೆಎಲ್ಇ ವಿವಿ ಆವರಣದಲ್ಲಿ ನೇಹಾ ಹಿರೇಮಠ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು ಸೂಚಿಸಿದೆ.
ಈ ಸಂಬಂಧ ಪ್ರಕರಣದ ಅರ್ಜಿಯೊಂದರ ವಿಚಾರಣೆ ನಡೆಸಿದಂತ ಧಾರವಾಡ ಹೈಕೋರ್ಟ್ ಪೀಠವು, ಕೇಸ್ ವಿಚಾರಣೆಗೆ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಅಲ್ಲದೇ 6 ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದೆ.
ಆರೋಪಿ ಫಯಾಜ್ ಖುದ್ದು ಹಾಜರಾತಿಯಲ್ಲಿ ವಿಚಾರಣೆ ನಡೆಯುತ್ತಿಲ್ಲ. ವೀಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸುತ್ತಿರುವುದರಿಂದ ತೊಂದರೆಯಾಗಿದೆ. ಈ ವಿಚಾರವಾಗಿ ಹೈಕೋರ್ಟ್ ಗೆ ಫಯಾಜ್ ಪರ ವಕೀಲರು ಮೊರೆ ಹೋಗಿದ್ದರು. ಕೇಸ್ ವಿಚಾರಣೆಗೆ ತಡೆ ನೀಡುವಂತೆಯೂ ಆರೋಪಿ ಫಯಾಸ್ ಪರ ವಕೀಲರು ಕೋರಿದ್ದರು.
ಆರೋಪಿ ಫಯಾಜ್ ಪರ ಮನವಿಯನ್ನು ಧಾರವಾಡ ಹೈಕೋರ್ಟ್ ಪೀಠವು ಪುರಸ್ಕರಿಸಿ, ತಡೆಯಾಜ್ಞೆಯನ್ನು ನೀಡಿತ್ತು. ಇಂತಹ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ನೇಹಾ ಕುಟುಂಬದ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿ ತೀರ್ಪುನ್ನು ಧಾರವಾಡ ಹೈಕೋರ್ಟ್ ಕಾಯ್ದಿರಿಸಿತ್ತು.
ಇಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ರಾಚಯ್ಯ ಪ್ರಕಟಿಸಿದ್ದಾರೆ. ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಈಗಾಗಲೇ ಹಲವು ಸಾಕ್ಷ್ಯ, ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ನಡೆಸಿದೆ. ಉಳಿದ ಸಾಕ್ಷಿಗಳ ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ಮುಂದುವರೆಸಲಿದೆ.
ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್








