ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿರುವ ನೇಹಾರವರ ಮನೆಗೆ ಭೇಟಿ ನೀಡಿ ಅವರ ತಂದೆ ನಿರಂಜನ ಹಿರೇಮಠ, ಅವರ ತಾಯಿ, ಸಹೋದರ ಹಾಗೂ ಕುಟುಂಬಸ್ಥರಿಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಸಾಂತ್ವಾನ ಹೇಳಿದರು. ಅಲ್ಲದೇ ನೇಹಾರವರ ಸಾವಿಗೆ ಸಂತಾಪವನ್ನು ಸೂಚಿಸಿದರು.
ಈ ಸಂದರ್ಭದಲ್ಲಿ ನನ್ನೊಂದಿಗೆ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಶಾಸಕರಾದ ಪ್ರಸಾದ್ ಅಬ್ಬಯ್ಯ ಹಾಗೂ ಮತ್ತಿತರ ಮುಖಂಡರು ಜೊತೆಗಿದ್ದರು.
ನಿರಂಜನ ಹಿರೇಮಠ ರವರು ನಮ್ಮ ಕುಟುಂಬದ ಭಾಗವಾಗಿದ್ದು ಅವರ ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ.
ನೇಹಾರವರ ಸಾವಿಗೆ ನ್ಯಾಯ ದೊರಕಿಸಿ ಕೊಡುವುದಾಗಿ ಅವರ ಕುಟುಂಬಕ್ಕೆ ಭರವಸೆ ನೀಡಿದ್ದೇವೆ. ಈ ನಿಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಈ ಕೆಳಗಿನ ನಿರ್ಧಾರಗಳನ್ನು ತೆಗೆದುಕೊಂಡಿದೆ.
1. ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ.
2. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಮತ್ತು ಕರ್ನಾಟಕ ಸರ್ಕಾರವು ಈ ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಿದೆ. 90 ರಿಂದ 120 ದಿನಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದೇವೆ.
3. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಲಿದ್ದು ಕೊಲೆಗಾರನಿಗೆ ನೇಣು ಹಾಕುವ ಮೂಲಕ ಮರಣದಂಡನೆಯ ಶಿಕ್ಷೆ ನೀಡುವಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಲಿದ್ದೇವೆ.
ನೇಹಾಗೆ ನ್ಯಾಯ ದೊರಕಿಸಿಕೊಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು ಹಾಗಾಗಿ ಆರೋಪಿಗೆ ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸುವ ಮೂಲಕ ಯಾರೂ ಕೂಡ ಇಂತಹ ಅಪರಾಧ ಎಸಗಲು ಭಯ ಪಡುವಂತಹ ಶಿಕ್ಷೆಯನ್ನು ವಿಧಿಸಲು ಪ್ರಯತ್ನಿಸುತ್ತೇವೆ ಎಂದರು.
BIG NEWS: ಇಂದಿನಿಂದ ಏ.26ರ ಮಧ್ಯರಾತ್ರಿವರೆಗೆ ಬೆಂಗಳೂರಲ್ಲಿ ‘144 ಸೆಕ್ಷನ್’ ಜಾರಿ: ‘ಮದ್ಯ ಮಾರಾಟ’ಕ್ಕೂ ನಿಷೇಧ
‘ನಾನು ಆ ರೀತಿ ಹೇಳಿಲ್ಲ’ : ಸಂಪತ್ತಿನ ಮರುಹಂಚಿಕೆ ವಿವಾದದ ಕುರಿತು ‘ರಾಹುಲ್ ಗಾಂಧಿ’ ಸ್ಪಷ್ಟನೆ
“ಪಾಶ್ಚಿಮಾತ್ಯ ಮಾಧ್ಯಮಗಳು ತಮ್ಮನ್ನು ಭಾರತದ ಚುನಾವಣೆಯ ಭಾಗವೆಂದು ಭಾವಿಸುತ್ವೆ” : ಜೈಶಂಕರ್ ತಿರುಗೇಟು